ಫೆಂಗಲ್ ಚಂಡಮಾರುತ: ಧಾರಾಕಾರ ಮಳೆ
ಪ್ರಗತಿವಾಹಿನಿ ಸುದ್ದಿ: ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಹವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ 10 ಜಿಲೆಗಳಲ್ಲಿ ಶಾಲಾ-ಕಾಲೇಜುಗಳಿಗೆರಜೆ ಘೋಷಿಸಲಾಗಿದೆ.
ಫೆಂಗಲ್ ಚಂಡಮಾರುತ ಅರಬ್ಬಿ ಸಮುದ್ರತ್ತ ಸಾಗುತ್ತಿದ್ದು, ಸಮುದ್ರಗಳಲ್ಲಿ ಅಲೆಗಳ ಅಬ್ಬರ ಜೋಗಾದೆ. ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಇನ್ನೊಂದೆಡೆ ಕರಾವಳಿ ಭಾಗದಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಕೆಲವೆಡೆ ಗುಡ್ಡಕುಸಿತ ಸಂಭವಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಕೋಲಾರ, ಚಾಮರಾಜನಗರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಚಂಡಮಾರುತದ ಪರಿಣಾಮ ಭರಿ ಮಳೆ, ಶೀತಗಾಳಿ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಹಾಸನ, ದಕ್ಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚಂಡಮಾರುತದ ಪರಿಣಾಮ ಹೆಚ್ಚು ಇರಲಿದೆ. ಇನ್ನು ಶಿವಮೊಗ್ಗ, ದಾವಣಗೆರೆ, ಉತ್ತರ ಕನ್ನಡ, ಹಾವೇರಿ ಜಿಲ್ಲೆಗಳಲ್ಲಿಯೂ ಸಾಧಾರಣ ಪರಿಣಾಮ ಇರಲಿದ್ದು, ಈ ಜಿಲ್ಲೆಗಳಲ್ಲಿಯೂ ನಿಗಾ ವಹಿಸಲು ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ