ಪ್ರಗತಿವಾಹಿನಿ ಸುದ್ದಿ: ಫೆಂಗಲ್ ಚಂಡಮಾರುತದಿಂದಾಗಿ ಕರ್ನಾಟಕದಲ್ಲಿಯೂ ಮೈಕೊರೆವ ಚಳಿಯೊಂದಿಗೆ ಧರಾಕಾರ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿಹಾಗೂ ಚಳಿ ಇರುವುದರಿಂದ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ .ಈ ರಜಾ ದಿನದ ಕಲಿಕಾ ಪ್ರಕ್ರಿಯೆಗಳನ್ನ ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸಲಾಗುವುದು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ. ಎನ್ ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೀವ್ರ ಛಳಿ ಹಿನ್ನಲೆಯಲ್ಲಿ ಇಂದು (2 – 12 – 2024) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಒಂದು ದಿನ ರಜೆ ಫೋಷಿಸಿ ಜಿಲ್ಲಾಧಿಕಾರಿ ಶಿವಶಂಕರ್ ಆದೇಶಿಸಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ (ಡಿಸೆಂಬರ್ 2 ರಂದು) ಸೋಮವಾರ ಇಂದು ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ಆದೇಶಿಸಿದ್ದಾರೆ.
ಇಂದು ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ
ಮಂಡ್ಯ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ ದಿನಾಂಕ 2/12/2024ರ ಸೋಮವಾರ ಇಂದು ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿ.ಯುಸಿ ವರೆಗೆ) ರಜೆ ಘೋಷಣೆ ಮಾಡಲಾಗಿದೆ.
ಈ ರಜೆಯು ಜಿಲ್ಲೆಯ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( ಎರಡನೇ ಪಿಯುಸಿ) ವರೆಗೆ ಅನ್ವಯವಾಗುತ್ತದೆ.
ಈ ರಜಾ ದಿನದ ಕಲಿಕಾ ಪ್ರಕ್ರಿಯೆಯನ್ನು ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸಲಾಗುವುದು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಶೀತ, ಗಾಳಿ ಮುನ್ನೆಚ್ಚರಿಕೆ ವಹಿಸಲು ಡಿ.ಸಿ. ಮನವಿ*
ಜಿಲ್ಲೆಯಾದ್ಯಂತ ತುಂತುರು ಮಳೆ ಹಾಗೂ ಶೀತ,ಗಾಳಿ ಹಿನ್ನೆಲೆಯಲ್ಲಿ ಮಕ್ಕಳು ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ಜಿಲ್ಲಾಧಿಕಾರಿ ಶಿವಶಂಕರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಫೆಂಗಲ್ ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿಯೂ ಅತಿಯಾದ ಛಳಿ, ಶೀತಗಾಳಿ ಬೀಸುತ್ತಿದ್ದು, ಸಾರ್ವಜನಿಕರು ಬೆಚ್ಚಗಿನ ಉಡುಪುಗಳನ್ನು ಧರಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು.ಅವಶ್ಯವಿದ್ದರಷ್ಟೇ ಮನೆಯಿಂದ ಹೊರ ಹೋಗುವುದು
ವಯೋವೃದ್ದರು ಅನಾರೋಗ್ಯ ಪೀಡಿತರು ಆದಷ್ಟು ಮನೆಯಲ್ಲಿಯೇ ಇದ್ದು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು
ಕೃಷಿ ಚಟುವಟಿಕೆಗಳಲ್ಲಿ ಭಾಗವಹಿಸುವ ಕೃಷಿಕರು ಮುಂಜಾಗ್ರತೆ ವಹಿಸುವ ಮೂಲಕ ಕೃಷಿ ಕಾರ್ಯಗಳಲ್ಲಿ ತೊಡಗಿಕೊಳ್ಳಲು ಮನವಿ ಮಾಡಿದ್ದಾರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ