Kannada NewsKarnataka News

ಭ್ರೂಣ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ನಡೆದಿರುವ ಭ್ರೂಣ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲು ನಿರ್ಧರಿಸಲಾಗಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಸೂಚನೆ ನೀಡಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ಬರೋಬ್ಬರಿ 900ಕ್ಕೂ ಹೆಚ್ಚು ಹೆಣ್ಣುಭ್ರೂಣಗಳ ಹತ್ಯೆ ಮಾಡಿದ್ದ ಇಬ್ಬರು ವೈದ್ಯರು ಸೇರಿದಂತೆ 9 ಆರೋಪಿಗಳನ್ನು ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರು ಈಗಾಗಲೆ ಬಂಧಿಸಿದ್ದಾರೆ. ಮಂಡ್ಯದ ಆಲೇಮನೆಯಲ್ಲಿ ಭ್ರೂಣ ಪತ್ತೆ ಮಾಡಿ ನಂತರ ಅವುಗಳನ್ನು ಹತ್ಯೆ ಮಾಡಲಾಗುತ್ತಿತ್ತು. ಇದೊಂದು ದೊಡ್ಡ ಜಾಲವಾಗಿದ್ದು, ಪ್ರಕರಣದ ಗಂಭೀರತೆಯ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button