Kannada NewsKarnataka NewsLatest

ಸರಕಾರದ ನೀತಿ ವಿರುದ್ಧ ಸದನದಲ್ಲಿ ಹೋರಾಟ – ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳಲು ಭಾನುವಾರ ಸಂಜೆ ಬೆಳಗಾವಿಗೆ ಆಗಮಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಮಾಜಿ ಸಚಿವ ಎ.ಬಿ.ಪಾಟೀಲ, ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಸ್ವಾಗತಿಸಿದರು.

ಬೆಳಗಾವಿ ಅಧಿವೇಶನದಲ್ಲಿ ಸರಕಾರದ ನೀತಿ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಪ್ರವಾಹ, ಉತ್ತರ ಕರ್ನಾಟಕದ ಸಮಸ್ಯೆಗಳು, ಮತಾಂತರ, ಮನೆಗಳನ್ನು ಕೊಡದಿರುವುದು, ಶೇ.40ರಷ್ಟು ಲಂಚ ಮೊದಲಾದವುಗಳ ಕುರಿತು ಹೋರಾಟ ಮಾಡಲಾಗುವುದು ಎಂದರು.

ಪ್ರವಾಹಕ್ಕೆ ಪರಿಹಾರ ಬಂದಿಲ್ಲ. ರೈತರ ಹೋರಾಟಕ್ಕೆ ಸ್ಪಂದನೆ ಇಲ್ಲ. ನಮ್ಮ ಸರಕಾರ ಇದ್ದಾಗ ಪ್ರತಿಭಟನೆ ನಡೆದರೆ ತಕ್ಷಣ ಸ್ಪಂದಿಸುತ್ತಿದ್ದೆವು. ಆದರೆ ಈಗಿನ ಸರಕಾರ ಯಾವುದಕ್ಕೂ ಸ್ಪಂದಿಸುತ್ತಿಲ್ಲ. ಯಾವುದಕ್ಕೆ ಕೇಳಿದರೂ ದುಡ್ಡಿಲ್ಲ ಎನ್ನುತ್ತಾರೆ. ಹಾಗಾದರೆ ದುಡ್ಡೆಲ್ಲ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.

ರಮೇಶ್ ಜಾರಕಿಹೊಳಿ ಹೇಳಿಕೆ ಯಾರಿಗೂ ಅರ್ಥವಾಗಿಲ್ಲ ಟಾಂಗ್ ನೀಡಿದ ಸತೀಶ್ ಜಾರಕಿಹೊಳಿ

 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button