Belagavi NewsBelgaum NewsKannada NewsKarnataka NewsNationalPolitics

*ಅಧ್ಯಕ್ಷರ ಆಯ್ಕೆ ವಿಚಾರವಾಗಿ ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಟ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗಳು ನಡೆಯುತ್ತಿದೆ.

ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ.

ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ

ಎಐಸಿಸಿ ವೀಕ್ಷಕ ಮನೋಜ್ ಚವ್ಹಾಣ ನೇತೃತ್ವದಲ್ಲಿ ನಗರ ಘಟಕದ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿತ್ತು. ಅಭಿಪ್ರಾಯ ಸಂಗ್ರಹದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಮಾಜಿ ಶಾಸಕ ರಮೇಶ ಕುಡಚಿ ಆಕ್ರೋಶ ಹೊರ ಹಾಕಿದ್ದಾರೆ. 

ಈ ವೇಳೆ ಮಾತಿಗೆಮಾತು ಬೆಳೆದು ಗಲಾಟೆ ಆರಂಭವಾಗಿ ಕಾರ್ಯಕರ್ತರು ಹೊಡೆದಾಡಿದ್ದಾರೆ.

ಮಾಜಿ ಶಾಸಕ ರಮೇಶ ಕುಡಚಿ ಆಪ್ತ ಹೇಮಂತ್ ಲೇಂಗಡೆ ಎಂಬಾತನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಲೆಂಗಡೆ ಸಾಮಾಜಿಕ ಜಾಲತಾಣಗಳಲ್ಲೂ ಪಕ್ಷದ ಮುಖಂಡರ ವಿರುದ್ಧ ನಿರಂತರ ಪೋಸ್ಟ್ ಹಾಕುತ್ತಿದ್ದರೆನ್ನಲಾಗಿದೆ.

ಘಟನೆ ನಡೆಯುತ್ತಿದ್ದಂತೆ ಮಾರ್ಕೆಟ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button