ಪ್ರಗತಿವಾಹಿನಿ ಸುದ್ದಿ: ಉದ್ಯಮಿಗೆ ಗನ್ ಹಿಡಿದು ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಫೈಟರ್ ರವಿಯನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.
ಉದ್ಯಮಿ ಸೋಮಶೇಖರ್ ಎಂಬುವವರ ಮೇಲೆ ಹಲ್ಲೆ ಹಾಗೂ ಬೆದರಿಕೆ ಹಕೈದ ಪ್ರಕರಣ ಸಂಬಂಧ ಫೈಟರ್ ರವಿ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಣಕಾಸು ವಿಚಾರಕ್ಕೆ ಕೊಲೆ ಬೆದರಿಕೆ ಆರೋಪ ಹಿನ್ನೆಲೆಯಲ್ಲಿ ಪೊಲೀಸರು ಫೈಟರ್ ರವಿಯನ್ನು ಬಂಧಿಸಿದ್ದಾರೆ.
ಶ್ರೀಕಾಂತ್ ಎಂಬುವವರಿಗೆ ಸೋಮಶೇಖರ್ 75 ಲಕ್ಷ ರೂಪಾಯಿ ಹಣ ಕೊಟ್ಟಿದ್ದರು. ಶ್ರೀಕಾಂತ್ ಬಳಿ ಹಣ ಕೇಳದಂತೆ ಸೋಮಶೇಖರ್ ಗೆ ಹೆದರಿಸಿ. ಗನ್ ತೋರಿಸಿ ಕೊಲೆ ಬೆದರಿಕೆ ಹಾಕಿದ್ದಾಗಿ ಫೈಟರ್ ರವಿ ವಿರುದ್ಧ ಆರೋಪ ಕೇಳಿಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ