ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಜಯನಗರ ಕ್ಷೇತ್ರಕ್ಕೆ ಅನುದಾನ ಹಂಚಿಕೆ ಮಾಡದ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ಈ ಹಿಂದೆ ಡಿಕೆಶಿ ನಾನೇ ಬೆಂಗಳೂರಿನ ಜಯನಗರ ಕ್ಷೇತ್ರ ಬಿಟ್ಟು ಉಳಿದೆಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಲು ಆದೇಶಿಸಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು, ಡಿಕೆಶಿಯ ಈ ಹೇಳಿಕೆಯನ್ನು ಕೇಳಿ ಬಿಜೆಪಿ ನಾಯಕರು ಕೆಂಡಾಮಂಡಲವಾಗಿದ್ದರು.
ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಡಿಸಿಎಂ ಡಿಕೆಶಿ ಅವರಿಗೆ ಪತ್ರವನ್ನು ಕೂಡ ಬರೆದಿದ್ದರು, ಇದೀಗ ಈ ವಿಚಾರವನ್ನು ಇಟ್ಟುಕೊಂಡು ವಕೀಲ ಹೆಚ್ .ಯೋಗೇಂದ್ರ ಎಂಬುವವರು ಡಿಕೆ ಶಿವಕುಮಾರ್ ವಿರುದ್ಧ ಬುಧವಾರ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.
ಈ ದೂರಿನಲ್ಲಿ, ಬೆಂಗಳೂರು ಅಭಿವೃದ್ಧಿ ಖಾತೆ ಸಚಿವರ ವಿವೇಚನಾ ಕೋಟಾದಡಿ ಅನುದಾನ ಹಂಚಿಕೆ ಮಾಡದೇ, ಉಪಮುಖ್ಯಮಂತ್ರಿ ಆಗುವ ವೇಳೆ ಸ್ವೀಕರಿಸಿದ್ದ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ