Kannada NewsKarnataka NewsPolitics

*ಶಾಸಕ ಅರವಿಂದ ಬೆಲ್ಲದ, ಉಪಮೇಯರ್ ಸತೀಶ ಹಾನಗಲ್ ವಿರುದ್ಧ ದೂರು ದಾಖಲು*

ಪ್ರಗತಿವಾಹಿ‌ನಿ ಸುದ್ದಿ: ಕೊಳಚೆ ನಿರ್ಮೂಲನಾ ಮಂಡಳಿ ನೀಡಿರುವ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಹಾಕಿರುವ ಆರೋಪದಲ್ಲಿ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ ಹಾನಗಲ್‌ ಮತ್ತು ಲಕ್ಷ್ಮಣ ಭೋವಿ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2023 ಡಿಸೆಂಬರ್. 30ರಂದು ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ ನಡೆದಿತ್ತು. ಅಂದು ಪರಶುರಾಮ ದಾವಣಗೆರೆ, ಆನಂದನಗರದ ಕೃಷ್ಣಾಕಾಲೊನಿಗೆ ಸಂಬಂಧಪಟ್ಟ ಖಾಲಿ ಜಾಗವನ್ನು ಕೊಳಚೆ ನಿರ್ಮೂಲನಾ ಮಂಡಳಿ ಅಕ್ರಮವಾಗಿ ಹಕ್ಕುಪತ್ರ ವಿತರಿಸಿದೆ ಎಂದು ದೂರಿ, ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಹಿಂಪಡೆಯುವಂತೆ ಉಪ ಮೇಯ‌ರ್ ಮೇಯರ್ ಸತೀಶ ಹಾನಗಲ್ ಹಾಗೂ ಶಾಸಕ ಅರವಿಂದ ಬೆಲ್ಲದ ಕುಮ್ಮಕ್ಕಿನಿಂದ ಲಕ್ಷ್ಮಣ ಭೋವಿ ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿತರ ಮೇಲೆ ಕ್ರಮಕೈಗೊಳ್ಳಬೇಕು ಎಂದು 4ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೂರು ದಾಖಲಿಸಿದ್ದರು. ನ್ಯಾಯಾಲಯವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button