Film & EntertainmentKannada NewsKarnataka NewsLife StyleNational

*ಮಾಜಿ ಬಿಗ್ ಬಾಸ್ ಸ್ಪರ್ಧಿ ಮೇಲೆ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಲಾಂಗ್ ಹಿಡಿದು ರೀಲ್ಸ್ ಮಾಡಿದ ಕಾರಣಕ್ಕೆ ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಹಾಗೂ ವಿನಯ ವಿರುದ್ಧ ದೂರು ದಾಖಲಾಗಿ ಜೈಲು ಪಾಲಾಗಿದ್ದರು. ಇದರ ಬೆನ್ನಲೆ ಮತ್ತೊಬ್ಬ ಮಾಜಿ ಬಿಗ್ ಬಾಸ್ ಸ್ಪರ್ಧಿ ರಕ್ಷಕ್ ಬುಲೆಟ್ ಗೆ ಸಂಕಷ್ಟ ಎದುರಾಗಿದೆ.‌

ಹುಡುಗಿಯರನ್ನು ಮೆಚ್ಚಿಸುವ ಭರದಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಕ್ಷಕ್ ಬುಲೆಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಖಾಸಗಿ ವಾಹಿನಿ ಕಾರ್ಯಕ್ರಮವೊಂದರಲ್ಲಿ ಹುಡುಗಿಯನ್ನು ಹೊಗಳುವ ಭರದಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಅವಹೇಳನಕಾರಿ ಮಾತನಾಡಿದ್ದು ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಹಿಂದೂ ಕಾರ್ಯಕರ್ತ ಮಹೇಶ್ ಎಂಬುವವರು ಬೆಂಗಳೂರು ಪೊಲೀಸ್‌ ಆಯುಕ್ತ ಬಿ. ದಯಾನಂದ ಅವರಿಗೆ ದೂರು ಸಲ್ಲಿಸಿದ್ದಾರೆ.

ರಕ್ಷಕ್ ಬುಲೆಟ್ ಹುಡುಗಿಯನ್ನು ಹೊಗಳುವ ಭರದಲ್ಲಿ ಯಡವಟ್ಟು ಮಾಡಿಕೊಂಡಿದ್ದಾರೆ. ಸಹ ಸ್ಪರ್ಧಿಯ ಜತೆ ಮಾತಾಡುವಾಗ ನಿಮ್ಮನ್ನು ನೋಡ್ತಿದ್ರೆ ತಾಯಿ ಚಾಮುಂಡೇಶ್ವರಿ ಬೆಟ್ಟದಿಂದ ಇಳಿದು ಬಂದು ಸೀರೆ ಒಡವೆ ಬಿಚ್ಚಿಟ್ಟು ಪ್ಯಾಂಟು ಶರ್ಟು ಹಾಕೊಂಡು ಸ್ವಿಟ್ಸರ್ಲೆಂಡ್‌ನಲ್ಲಿ ಟ್ರಿಪ್ ಹೊಡಿತಿದ್ದಾಳೆ ಅನ್ನಿಸ್ತಿದೆ ಎಂದು ಡೈಲಾಗ್ ಹೊಡೆದಿದ್ದ.

ಇದೀಗ ಈ ಬಗ್ಗೆ ದೂರು ನೀಡಿದ್ದು, ರಕ್ಷಕ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಇನ್ನು ಜಿ ಕನ್ನಡ, ಭರ್ಜರಿ ಬ್ಯಾಚುಲರ್ಸ್, ಕಾರ್ಯಕ್ರಮದ ನಿರ್ದೇಶಕರು ಹಾಗೂ ತಂಡದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಪರ ಸಂಘಟನೆಗಳು ಪೊಲೀಸರಿಗೆ ಮನವಿ ಮಾಡಿದ್ದಾರೆ.

Home add -Advt

Related Articles

Back to top button