Kannada NewsPolitics

*ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಲು ಅರ್ಜಿ ಸಲ್ಲಿಸಿ: ಗೃಹ ಸಚಿವ ಪರಮೇಶ್ವರ*

ಪ್ರಗತಿವಾಹಿನಿ ಸುದ್ದಿ: ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ವಾಪಾಸ್ ಪಡೆಯುವ ಬಗ್ಗೆ ಸಿಎಂ ಸಿದ್ದರಾಮಯ್ಯ ಆದೇಶದ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಎಲ್ಲದಕ್ಕೂ ಒಂದು ವಿಧಿವಿಧಾನವಿದೆ ಅದರಂತೆ ಮಾಡಲಾಗುವುದು ಎಂದು ಹೇಳಿದರು.

ಕನ್ನಡಪರ ಹೋರಾಟಗಾರರು ಅರ್ಜಿ ಸಲ್ಲಿಸಿದರೆ, ಅವರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆದುಕೊಳ್ಳುತ್ತೇವೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ಕ್ಯಾಬಿನೆಟ್ ಸಮಿತಿ ಮಾಡಿದ್ದೇವೆ. ಅರ್ಜಿ ಕೊಟ್ಟರೆ, ಅವುಗಳನ್ನು ಕ್ಯಾಬಿನೆಟ್‌ನಲ್ಲಿ ಪ್ರಸ್ತಾಪಿಸಿ ಕೇಸ್‌ಗಳನ್ನು ಹಿಂಪಡೆಯಲು ಅನಕೂಲವಾಗುತ್ತದೆ ಎಂದು ಸಿಎಂ ಹೇಳಿದ್ದರು.

ಕನ್ನಡ ಹೋರಾಟಗಾರರ ಮೇಲೆ ದಾಖಲಾಗಿರುವ ಕೇಸ್ ವಾಪಸ್ ಪಡೆಯಲು ಒಂದು ವಿಧಿವಿಧಾನವಿದೆ, ಮೊದಲು ಅರ್ಜಿ ಸಲ್ಲಿಸಿ ಅದಾದ ಬಳಿಕ ಸಂಪುಟ ಉಪ ಸಮಿತಿಯಲ್ಲಿ ಸಮಿತಿ ಇದೆ, ತನಿಖೆ ನಡೆಸಬೇಕು. ಅದಾದ ಬಳಿಕ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button