ಪ್ರಗತಿವಾಹಿನಿ ಸುದ್ದಿ, ಮುಂಬೈ: ಸರ್ಕಾರ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಶುಕ್ರವಾರ ಪ್ರಕಟಿಸಿದೆ.
ಅಜಯ್ ದೇವಗನ್, ಸೂರ್ಯ ಅತ್ಯುತ್ತಮ ನಟರು ಹಾಗೂ ಅಪರ್ಣಾ ಬಾಲಮುರಳಿ ಅತ್ಯುತ್ತಮ ನಟಿ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಿಂದಿ ಚಿತ್ರ ‘ತಾನಾಜಿ : ದಿ ಅನ್‌ಸಂಗ್ ವಾರಿಯರ್’ ಚಿತ್ರಕ್ಕಾಗಿ ಅಜಯ್ ದೇವಗನ್ ಮತ್ತು ತಮಿಳು ಚಿತ್ರ ‘ಸೂರರೈ ಪೊಟ್ರು’ ಗಾಗಿ ಸೂರ್ಯ ಅವರಿಗೆ ಜಂಟಿಯಾಗಿ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಗಿದೆ.
ಇದೇ ವೇಳೆ ‘ಸೂರರೈ ಪೊಟ್ರು’ ಚಿತ್ರಕ್ಕಾಗಿ ಅಪರ್ಣಾ ಬಾಲಮುರಳಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ. ‘ಸೂರರೈ ಪೊಟ್ರು’ ತಮಿಳು ಚಿತ್ರಕ್ಕೆ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ