Cancer Hospital 2
Laxmi Tai Society2
Beereshwara add32

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ ಪಟ್ಟಿ ಅಂತಿಮ- ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ

Anvekar 3

ಶರಣ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಢೋಹರ ಕಕ್ಕಯ್ಯ ಸಮಗಾರ ಹರಳಯ್ಯ ಹಾಗೂ ಉರಿಲಿಂಗಪೆದ್ದಿಯವರ ಜಯಂತಿ ಉತ್ಸವ ಫೆ. ೧೦ ರಂದು


ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಫೆ. ೧೦ ರಂದು ಬೆಳಗ್ಗೆ ೧೧ ಗಂಟೆಗೆ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಶರಣ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಢೋಹರ ಕಕ್ಕಯ್ಯ ಸಮಗಾರ ಹರಳಯ್ಯ ಹಾಗೂ ಉರಿಲಿಂಗಪೆದ್ದಿಯವರ ಜಯಂತಿ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಜಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಉತ್ತರ ವಿಧಾನಸಭೆ ಶಾಸಕರಾದ ಆಸೀಫ್ (ರಾಜು) ಸೇಠ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ವಿಧಾನಸಭೆ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ನವದೆಹಲಿಯ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ವಾಯುವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷರಾದ ಭರಮಗೌಡ ಕಾಗೆ, ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷರು ಮಹಾಂತೇಶ ಕೌಜಲಗಿ ಅವರು ವಿಶೇಷ ಆಮಂತ್ರತರಾಗಿ ಆಗಮಿಸಲಿದ್ದಾರೆ.
ಪ್ರಾದೇಶಿಕ ಆಯುಕ್ತರಾದ ಸಂಜಯ ಶೆಟ್ಟೆಣ್ಣವರ, ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕರಾದ ವಿಕಾಸ್ ಕುಮಾರ್ ವಿಕಾಶ್, ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ, ಬೆಳಗಾವಿ ಪೊಲೀಸ್ ಆಯುಕ್ತರಾದ ಎಸ್. ಎನ್ ಸಿದ್ಧರಾಮಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಬೀಮಾಶಂಕರ ಗುಳೇದ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕರಾದ ರಾಹುಲ್ ಶಿಂಧೆ, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಅವರು ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತ ಇರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ ಪಟ್ಟಿ ಅಂತಿಮ- ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ


: ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿ ಪ್ರಕ್ರಿಯನ್ನು ಅಂತಿಮಗೊಳಿಸಲಾಗಿದ್ದು, ಆಯ್ಕೆಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ ಎಂದು ಆಯ್ಕೆ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಬುಧವಾರ(ಫೆ.೭) ಆಯ್ಕೆ ಸಮಿತಿಯ ಸಭೆಯಲ್ಲಿ ಆಯ್ಕೆ ಪ್ರಕ್ರಿಯನ್ನು ಪೂರ್ಣಗೊಳಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಸಲ್ಲಿಕೆಯಾಗಿರುವ ಅರ್ಜಿಗಳು ಮತ್ತು ದಾಖಲಾತಿಗಳನ್ನು ಕೂಲಂಕುಶವಾಗಿ ಪರಿಶೀಲಿಸಿದ ಬಳಿಕ ಆಯ್ಕೆ ಪಟ್ಟಿಯನ್ನು ಅಂತಿಮಗೊಳಿಸಲಾಯಿತು.
೨೮೩ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ೪,೭೪೩ ಅರ್ಜಿಗಳು ಹಾಗೂ ೮೦೮ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ೮,೧೩೫ ಅರ್ಜಿಗಳು ಸಲ್ಲಿಕೆಯಾಗಿದ್ದವು. ಜಿಲ್ಲೆಯ ೧೪ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ತಾಲ್ಲೂಕು ಮಟ್ಟದ ಪರಿಶೀಲನಾ ಸಮೀತಿಯಲ್ಲಿ ಅರ್ಜಿಗಳನ್ನು ಸುದೀರ್ಘ ಹಾಗೂ ಪಾರದರ್ಶಕವಾಗಿ ಪರಿಶೀಲಿಸಿದ ಬಳಿಕ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಲ್ಲಿ ಮಂಡಿಸಲಾಗಿತ್ತು.
ಆಯ್ಕೆ ಪಟ್ಟಿ ಪ್ರಕಟ:
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಆಯ್ಕೆಯನ್ನು ಅರ್ಹತೆ ಮತ್ತು ಮೆರಿಟ್ ಆಧಾರದಲ್ಲಿ ಪಾರದರ್ಶಕವಾಗಿ ಇಲಾಖೆಯ ಮಾರ್ಗಸೂಚಿ ಅನುಸಾರ ಆಯ್ಕೆ ಮಾಡಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಬೆಳಗಾವಿಯ ಜಿಲ್ಲಾ ಪಂಚಾಯತ, ಆಯಾ ತಾಲೂಕಿನ ತಾಲೂಕ ಕಚೇರಿ, ತಾಲೂಕು ಪಂಚಾಯತ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹಾಗೂ ಸಂಬಂಧಿಸಿದ ಗ್ರಾಮ ಪಂಚಾಯತ, ಶಾಲೆ ಹಾಗೂ ಅಂಗನವಾಡಿ ಕೆಂದ್ರಗಳಲ್ಲಿ ಪ್ರಚುರ ಪಡಿಸಲಾಗಿದೆ.
ಆಯ್ಕೆಯ ಸಂಬಂಧಿಸಿದಂತೆ ಅಭ್ಯರ್ಥಿಗಳು ಆಕ್ಷೇಪಣೆ ಇದ್ದಲ್ಲಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಫೆ.೨೧, ರಂದು ಸಂಜೆ ೫.೩೦ ಗಂಟೆಯೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಆಯ್ಕೆ ಸಮಿತಿಯ ಉಪಾಧ್ಯಕ್ಷರಾದ ರಾಹುಲ್ ಶಿಂಧೆ, ಆಯ್ಕೆ ಸಮಿತಿ ಸದಸ್ಯರಾದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮತ್ತು ಆಯ್ಕೆ ಸಮಿತಿ ಕಾರ್ಯದರ್ಶಿಗಳಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜ್, ಜಿಲ್ಲಾ ನಿರೂಪಣಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.


Emergency Service

ಅಂಗನವಾಡಿ ಮಕ್ಕಳಿಗೆ ಡೆಸ್ಕ್ ವ್ಯವಸ್ಥೆ ಕ್ರಮ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ


ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಕುಳಿತುಕೊಳ್ಳಲು ಡೆಸ್ಕ್ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಸೂಚನೆ ನೀಡಿದರು.
ಇಲ್ಲಿನ ಶಿವಾಜಿ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಫೆ.೦೭) ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಅಂಗನವಾಡಿ ಕಟ್ಟಡಗಳ ದುರಸ್ಥಿ, ಪುನರ್ ನಿರ್ಮಾಣ ಹಾಗೂ ಸುಸ್ಥಿತಿಯಲ್ಲಿರುವ ಕೇಂದ್ರಗಳ ಬಗ್ಗೆ ಮಾಹಿತಿ ಪಡೆದ ಅವರು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳನ್ನು ಸರಕಾರಿ ಶಾಲೆಗಳಿಗೆ ಸ್ಥಳಾಂತರಿಸಬೇಕು ಎಂದು ಸೂಚಿಸಿದರು.
ಅಂಗನವಾಡಿ ಮಕ್ಕಳು ಶಾಲೆಗಳಲ್ಲಿ ಇರುವುದರಿಂದ ಶಾಲೆಯ ವಾತಾವರಣದಲ್ಲಿ ಬೇಗ ಬೆರೆಯುತ್ತವೆ. ಅಂಗನವಾಡಿ ಕಟ್ಟಡಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿರಬಾರದು ಕಡ್ಡಾಯವಾಗಿ ಸೌಕರ್ಯಗಳನ್ನು ಒದಗಿಸಬೇಕು. ಉತ್ತಮ ಗಾಳಿ ಹಾಗೂ ಬೆಳಕು ಶುದ್ಧ ನೀರು ಒದಗಿಸುವಂತಿ ತಿಳಿಸಿದರು.
ಪ್ರತಿ ೩ ತಿಂಗಳಿಗೊಮ್ಮೆ ಅಂಗನವಾಡಿ ಕೇಂದ್ರಗಳಿಗೆ ವೈದ್ಯಾಧಿಕಾರಿಗಳು ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ತಪಾಸಣೆ ನಡೆಸಬೇಕು. ತೂಕ ಕಡಿಮೆ ಸೇರಿದಂತೆ ಯಾವುದೇ ಆರೋಗ್ಯದ ಸಮಸ್ಯೆ ಕಂಡು ಬಂದರೆ ಚಿಕಿತ್ಸೆ ನೀಡಬೇಕು ಹಾಗೂ ಅಪೌಷ್ಠಿಕತೆ ಇರುವ ಮಕ್ಕಳನ್ನು ಎನ್‌ಆರ್‌ಸಿ/ ಎಂಎನ್‌ಆರ್‌ಸಿಗೆ ಕಳುಹಿಸಿ ಚಿಕಿತ್ಸೆ ಕೊಡಿಸಲು ನಿರ್ದೇಶನ ನೀಡಿದರು.
ಪ್ರತಿ ತಿಂಗಳು ೩ನೇ ಶನಿವಾರ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಬಾಲವಿಕಾಸ ಸಲಹಾ ಸಮಿತಿ ಸಭೆ ಏರ್ಪಡಿಸಬೇಕು. ಈ ಸಭೆಯಲ್ಲಿ ಗರ್ಭಿಣಿ/ಬಾಣಂತಿಯರಿಗೆ ಸಭೆಯಲ್ಲಿ ಹಾಜರಿರಲು ತಿಳಿಸಿ ಇಲಾಖೆಯ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು. ಅಂಗನವಾಡಿ ಕೇಂದ್ರಗಳ ಮಕ್ಕಳನ್ನು ಶಾಲಾ ಪೂರ್ವ ಶಿಕ್ಷಣ ಮುಗಿದ ನಂತರ ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಹೋಗುವಂತೆ ಎಲ್ಲ ಕಾರ್ಯಕರ್ತೆಯರು ಹಾಗೂ ಮುಖ್ಯೋಪಾಧ್ಯಯರು ಪ್ರೇರೇಪಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಂತೆ ತಿಳಿಸಿದರು.
ಅದೇ ರೀತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಹಾಜರಾತಿ ಪರಿಶೀಲಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಸಿಬ್ಬಂದಿಯ ಕಾರ್ಯವೈಖರಿ ಕುರಿತು ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜ್ ಎ.ಎಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿಗಳಾದ ರೇವತಿ ಹೊಸಮಠ, ಜಿಲ್ಲೆಯ ಎಲ್ಲ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.


Gokak Jyotishi add 8-2
Bottom Add3
Bottom Ad 2

You cannot copy content of this page