Kannada NewsKarnataka News

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡ ಜನರಿಗೆ ಆರ್ಥಿಕ ನೆರವು

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡ ಜನರಿಗೆ ಆರ್ಥಿಕ ನೆರವು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಡ ಜನರಿಗೆ ಆರ್ಥಿಕ ನೆರವು ನೀಡುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕಾಯಕ ಮುಂದುವರಿದಿದೆ.

ಪ್ರವಾಹ ಸಂದರ್ಭದಲ್ಲಿ ನಿರಂತರವಾಗಿ ಕ್ಷೇತ್ರ ಸುತ್ತಾಡಿ ಸಂತೈಸಿದ್ದ ಶಾಸಕಿ, ಈಗ ಅವರಿಗೆ ವಿವಿಧ ರೀತಿಯಲ್ಲಿ ಪರಿಹಾರ ನೀಡುವ ಕಾರ್ಯದಲ್ಲಿ ತೊಡಗಿದ್ದಾರೆ. ಜೊತೆಗೆ ವಿವಿಧ ಮಾರಕ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದಲೂ ಹಣಕಾಸಿನ ನೆರವು ಒದಗಿಸುತ್ತಿದ್ದಾರೆ.

ಮಾರಕ ಕಾಯಿಲೆ

ವಿವಿಧ ಕಾಯಿಲೆಯಿಂದ ಬಳಲುತ್ತಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರಿಗೆ ಚೆಕ್ ಗಳನ್ನು ವಿತರಿಸಲಾಯಿತು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕ್ರಾಂತಿನಗರದ ಅಶೋಕ ಶಿ ಕಾಂಬಳೆ, ಸುಳೇಬಾವಿ ಕೈಲಾಸ ನಗರದ ಮುಶೆಪ್ಪ ಹ ಭಜಂತ್ರಿ, ಕರಡಿಗುದ್ದಿಯ ನಿಂಗಪ್ಪ ಬ ರಾಚಣ್ಣವರ, ಬಾಚಿಯ ಆಂಜನೇಯ ಯ ಕಾಂಬಳೆ ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್ ಸ್ವೀಕರಿಸಿದರು. ಇವರೆಲ್ಲ ಹೃದಯ ಕಾಯಿಲೆ, ಕ್ಯಾನ್ಸರ್ ನಂತರ ಮಾರಕ ಕಾಯಿಲೆಯಿಂದ ಬಳಲುತ್ತಿದ್ದಾರೆ.

ಈ ಕಾಯಿಲೆಗಳ ಚಿಕಿತ್ಸೆಯ ವೆಚ್ಚ ಭರಿಸುವ ಸಲುವಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವಿನ ಚೆಕ್ ಗಳನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಸ್ತಾಂತರಿಸಿದರು.

ಪ್ರವಾಹ ಪರಿಹಾರ

  ಸರ್ಕಾರದ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ಹಲವರಿಗೆ ಚೆಕ್ ಗಳನ್ನು ವಿತರಿಸಲಾಯಿತು. ಸುಳೇಭಾವಿ, ಶಿಂದೊಳ್ಳಿ, ಮುತಗಾ  ಗ್ರಾಮದಲ್ಲಿ ಪ್ರವಾಹ ಪೀಡಿತ ನಿರಾಶ್ರಿತರಿಗೆ ಪರಿಹಾರದ ಚೆಕ್ ಗಳನ್ನು ಹಸ್ತಾಂತರಿಸಲಾಯಿತು. ಮತ್ತು ನೆರೆ ಸಂತ್ರಸ್ತರಿಗೆ ಹೊದಿಕೆ, ಆಹಾರ ಧಾನ್ಯಗಳನ್ನು ಸಹ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿತರಿಸಿದರು.
  ಸಿಂದೋಳಿ, ಮುತಗಾ ಹಾಗೂ ಸುಳೇಭಾವಿ ಗ್ರಾಮಗಳಿಗೆ ಭೇಟಿ  ಕೊಟ್ಟು ಹಾನಿಗೊಳಗಾದ ಸ್ಥಳಗಳನ್ನು ವೀಕ್ಷಿಸಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಹೆಬ್ಬಾಳಕರ್ ಮಾಡಿದರು.
  

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button