CrimeKannada NewsKarnataka NewsLatest

*ತಂದೆ-ತಾಯಿಯನ್ನೇ ಬರ್ಬರವಾಗಿ ಕೊಲೆಗೈದ ಟೆಕ್ಕಿ*

ಪ್ರಗತಿವಾಹಿನಿ ಸುದ್ದಿ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ತಂದೆ-ತಾಯಿಯನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. 

ಈ ಘಟನೆ ಬೆಂಗಳೂರು ನಗರವನ್ನು ಬೆಚ್ಚಿಬೀಳಿಸಿದೆ. ಹತ್ಯೆಯಾದವರನ್ನು ತಂದೆ ನವೀನ್ ಚಂದ್ರ ಭಟ್ ಹಾಗೂ ತಾಯಿ ಶಾಮಲಾ ಭಟ್ ಎಂದು ಗುರುತಿಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿ ಅವರ ಪುತ್ರ ರೋಹನ್ ಭಟ್ ನನ್ನು ಪೊಲೀಸರು ಬಂಧಿಸಿದ್ದಾರೆ. 

ಆರೋಪಿ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಕುಟುಂಬದೊಳಗಿನ ಹಣಕಾಸು ವಿಚಾರವೇ ಈ ದ್ವೇಷದ ಮೂಲವಾಗಿದ್ದು, ವಾಗ್ವಾದ ತೀವ್ರ ಸ್ವರೂಪ ಪಡೆದು ಭೀಕರ ಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ರೋಹನ್ ಭಟ್ ಚಾಕುವಿನಿಂದ ತಂದೆ-ತಾಯಿಯ ಮೇಲೆ ನಿರಂತರವಾಗಿ ದಾಳಿ ನಡೆಸಿ ಕೊಲೆ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಹೆಚ್‌ಎಎಲ್ ಪೊಲೀಸ್ ಠಾಣೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದು, ಹೆಚ್ಚಿನ ವಿಚಾರಣೆ ಮುಂದುವರಿದಿದೆ.

Home add -Advt

Related Articles

Back to top button