Belagavi NewsBelgaum NewsKannada NewsKarnataka News

*ನಿಯಮ ಉಲ್ಲಂಘಿಸಿದರೆ ದಂಡ, ಶಿಕ್ಷೆ: ತಂಬಾಕು‌ ಮಾರಾಟಗಾರರಿಗೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಂಬಾಕು ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಮತ್ತು ಕೋಟ್ಟಾ-2003 ರ ಕಾಯ್ದೆ ಕುರಿತ ತರಬೇತಿ ಕಾರ್ಯಾಗಾರವನ್ನು ರಾಮದುರ್ಗ ತಾಲ್ಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಗುರುವಾರ(ಮಾ.12) ರಾಮದುರ್ಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಿಪಿಐ ವಿನಾಯಕ ಬಡಿಗೇರ ಅವರು, ತಂಬಾಕು ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ಕೋಟ್ಟಾ ಕಾಯ್ದೆ ಕುರಿತು ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಡಾ. ಶ್ವೇತಾ ಪಾಟೀಲ್, ತಂಬಾಕು ಸೇವನೆಯಿಂದ ಅನೇಕ ಕ್ಯಾನ್ಸರ್ ಕಾರಕ ರೋಗಗಳು ಗ್ಯಾಂಗ್ರೀನ್, ಗರ್ಭಕಂಠದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಮಕ್ಕಳ ಬೆಳವಣಿಗೆಯಲ್ಲಿ ಕುಂಠಿತ ಹೀಗೆ ಹತ್ತು ಹಲವಾರು ಕಾಯಿಲೆಗಳು ತಂಬಾಕು ಸೇವನೆಯಿಂದ ದುಷ್ಪರಿಣಾಮ ಬೀರುತ್ತವೆ ಎಂದು ವಿವರಿಸಿದರು.

ಕೋಟ್ಟಾ ಕಾಯ್ದೆ ಅಡಿಯಲ್ಲಿ ಸೆಕ್ಷನ್ -4 ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇದ ಹಾಗೂ 1000 ರೂ ದಂಡ ವಿಧಿಸಿಲಾಗುತ್ತಿದೆ. ಸೆಕ್ಷನ್-6 (ಏ) ಪ್ರಕಾರ 21 ವರ್ಷದ ಒಳಗಿನ ಯುವಕರಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ನಿಷೇಧಿಸಲಾಗಿದೆ. ಸೆಕ್ಷನ್-6 (ಬಿ) ಪ್ರಕಾರ ಶೈಕ್ಷಣಿಕ ಸಂಸ್ಥೆಯ 100 ಗಜದ ಅಂತರದೋಳಗೆ ತಂಬಾಕು ಉತ್ಪನ್ನಗಳನ್ನ ಮಾರಾಟ ಮಾಡುವುದು ಶಿಕ್ಷರ್ಹಾದ ಅಪರಾಧ ಮತ್ತು ಸೆಕ್ಷನ್-6 (ಸಿ) ಪ್ರಕಾರ ಬಿಡಿ ಬಿಡಿಯಾಗಿ ಸಿಗರೇಟ್ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಡಾ‌.ಶ್ವೇತಾ ಪಾಟೀಲ ತಿಳಿಸಿದರು.

Home add -Advt

ರಾಮದುರ್ಗ ತಾಲೂಕಾ ಆರೋಗ್ಯಾಧಿಕಾರಿಗಳು ಡಾ. ನವೀನ ನಿಜಗುಲಿ ಮಾತನಾಡಿ, ನಿಯಮಾನುಸಾರ ತಂಬಾಕು ಉತ್ಪನ್ನಗಳನ್ನ ಮಾರಾಟ ಮಾಡುವುದು ಕಡ್ಡಾಯಗಿರುತ್ತದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಮಾರಾಟ ಮಾಡಿದ್ದಲ್ಲಿ ದಂಡ ವಿಧಿಸಲಾಗುವುದು ಹಾಗೂ ಕಾನೂನು ಪ್ರಕಾರ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದರು.

ಮಾರಾಟಗಾರರು ತಂಬಾಕು ಮಾರಾಟ ಮಾಡಲು ಪ್ರತ್ಯೇಕವಾಗಿ ಪರವಾನಗಿ ಪಡೆದುಕೊಳ್ಳುವ ಕುರಿತು ಅವರು ಮಾಹಿತಿ ನೀಡಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕವಿತಾ ರಾಜನ್ನವರ, ಜಿಲ್ಲಾ ತಂಬಾಕು ವ್ಯಸನಮುಕ್ತ ಕೇಂದ್ರದಲ್ಲಿ ಸಿಗುವ ಸೇವಾ ಸೌಲಭ್ಯದ ಕುರಿತು ಕಾರ್ಯಾಗಾರದಲ್ಲಿ ತಿಳಿಸಿದರು.

ವಿವಿಧ ಇಲಾಖೆಯ ಮುಖ್ಯಸ್ಥರಿಗೆ ಹಾಗೂ ತಂಬಾಕು ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

https://pragativahini.com/karnataka-law-societybelagavinational-level-moot-court-competition-padma-vibhushan-shr

Related Articles

Back to top button