Belagavi NewsBelgaum NewsKannada NewsKarnataka News

*ಒಣ ಕಸ, ಹಸಿ ವಿಂಗಡಿಸಿ ನೀಡದಿದ್ರೆ ದಂಡ: ಬೆಳಗಾವಿ ಪಾಲಿಕೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಮನೆಯಲ್ಲಿ/ವ್ಯಾಪಾರ-ಉದ್ದಿಮೆಗಳಲ್ಲಿ ಉತ್ಪತ್ತಿಯಾಗುವ ದೈನಂದಿನ ತ್ಯಾಜ್ಯವನ್ನು ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಹಾಗೂ ಸ್ಪೆಷಲ್ ಕೇರ್ ವೇಸ್ಟ್ (ಬಲ್ಬಗಳು, ಬ್ಯಾಟರಿಗಳು, ಅವಧಿ ಮೀರಿದ ಔಷಧಿಗಳು, ಪೇಂಟ್ ಡಬ್ಬಿಗಳು ಇತ್ಯಾದಿ) ಈ ನಾಲ್ಕು ಮಾದರಿಯಲ್ಲಿ ತ್ಯಾಜ್ಯವನ್ನು ವಿಂಗಡಿಸಿ ಪಾಲಿಕೆಯ ತ್ಯಾಜ್ಯ ಸಂಗ್ರಹಕಾರರಿಗೆ ನೀಡಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ.

ಈ ನೀಯಮ ಉಲ್ಲಂಘಿಸಿದಲ್ಲಿ ಕಾನೂನನ್ವಯ ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button