Kannada NewsKarnataka NewsLatest

ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು; ಕೆಲವೇ ಹೊತ್ತಿನಲ್ಲಿ ಬಿಜೆಪಿ ಹೈಕಮಾಂಡ್ ನಿರ್ಧಾರ; ಬೆಂಗಳೂರಿಗೆ ಧಾವಿಸಿದ ಈಶ್ವರಪ್ಪ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.

ಬುಧವಾರ ಬೆಳಗಿನ ಜಾವ ಉಡುಪಿ ಪೊಲೀಸ್ ಠಾಣೆಯಲ್ಲಿ ಸಂತೋಷ ಸಹೋದರ ಪ್ರಶಾಂತ ನೀಡಿದ ದೂರಿನ ಅನ್ವಯ ಸೆ.306ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಅವರ ಆಪ್ತಸಹಾಯಕರ ವಿರುದ್ಧ ಕೂಡ ದೂರು ನೀಡಲಾಗಿದ್ದು, ಈಶ್ವರಪ್ಪ ಮೊದಲ ಆರೋಪಿಯಾಗಿದ್ದಾರೆ.

ಮೈಸೂರಿನಲ್ಲಿದ್ದ ಈಶ್ವರಪ್ಪ ಇದೀಗ ಬೆಂಗಳೂರಿಗೆ ಧಾವಿಸಿದ್ದು, ಅವರ ರಾಜಿನಾಮೆ ಪಡೆಯುವ ಸಾಧ್ಯತೆ ಇದೆ.

ಇಡೀ ಪ್ರಕರಣದ ಕುರಿತು ಬಿಜೆಪಿ ಹೈಕಮಾಂಡ್ ನಿನ್ನೆ ರಾತ್ರಿಯೇ ಮಾಹಿತಿ ತರಿಸಿಕೊಂಡಿದ್ದು , ಇನ್ನು ಕೆಲವೇ ಹೊತ್ತಿನಲ್ಲಿ ಈಶ್ವರಪ್ಪ ತಲೆದಂಡವಾಗುವ ಸಾಧ್ಯತೆ ಇದೆ. ಈಶ್ವರಪ್ಪ ಪ್ರಕರಣವನ್ನು ಕಾಂಗ್ರೆಸ್ ಅಸ್ತ್ರವಾಗಿ ಬಳಸಿಕೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರನ್ನು ಸಮರ್ಥಿಸಿಕೊಳ್ಳಬೇಕೋ ಅಥವಾ ರಾಜಿನಾಮೆ ಪಡೆಯಬೇಕೋ ಎನ್ನುವ ಗೊಂದಲದಲ್ಲಿ ಬಿಜೆಪಿ ಇದೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕಿದೆ.

ಈ ಮಧ್ಯೆ ಕಾಂಗ್ರೆಸ್ ಇಂದು ಬೆಳಗ್ಗೆ ರಾಜ್ಯಪಾಲರನ್ನು ಭೇಟಿಯಾಗಿ ಈಶ್ವರಪ್ಪ ವಜಾಕ್ಕೆ ಆಗ್ರಹಿಸಲಿದೆ. ರಾಜ್ಯಾದ್ಯಂತ ಹೋರಾಟವನ್ನೂ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಮುಖ್ಯಮಂತ್ರಿಗಳು ಹೋದಲ್ಲೆಲ್ಲ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿರುವ ಸಂತೋಷ ಕುಟುಂಬಸ್ಥರು, ಅಲ್ಲಿಯವರೆಗೆ ಶವವನ್ನು ಕೊಂಡೊಯ್ಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ಬುಧವಾರ ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button