Karnataka NewsNational

*40 ಜನ ಆರ್ ಸಿ ಬಿ ಫ್ಯಾನ್ಸ್ ಮೇಲೆ ಎಫ್ ಆರ್ ಐ ದಾಖಲು*

ಪ್ರಗತಿವಾಹಿನಿ ಸುದ್ದಿ: 18 ವರ್ಷದ ಬಳಿಕ ಕಪ್ ಗೆದ್ದ ಖುಷಿಯಲ್ಲಿದ್ದ ಆರ್ ಸಿ ಬಿ ಅಭಿಮಾನಿಗಳಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ.‌ ಬೆಂಗಳೂರಿನಲ್ಲಿ ನಡೆಸಿದ ವಿಜಯೋತ್ಸವದ ವೇಳೆ 11 ಜನ ಆರ್ ಸಿ ಬಿ ಅಭಿಮಾನಿಗಳು ಸಾವನ್ನಪ್ಪಿದರೆ, ತಡರಾತ್ರಿವರೆಗೂ ಸಂಭ್ರಮಿಸಿದ 40 ಜನ ಫ್ಯಾನ್ಸ್ ಮೇಲೆ ದೂರು ದಾಖಲಾಗಿದೆ.‌

ಈ ವರ್ಷದ ಐಪಿಎಲ್‌ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಪ್ ಗೆದ್ದ ಖುಷಿಗೆ ಮಹಾರಾಷ್ಟ್ರದ ಪುಣೆಯಲ್ಲಿ ಸಂಭ್ರಮಾಚರಣೆ ಮಾಡಿದ 40 ಕ್ಕೂ ಹೆಚ್ಚು ಅಭಿಮಾನಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಮಂಗಳವಾರ ತಡರಾತ್ರಿ ಐಪಿಎಲ್ ಫಲಿತಾಂಶದ ಬಳಿಕ ಪುಣೆಯ ಡೆಕ್ಕನ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಮಧಾರ್ ಗೋಪಾಲಕೃಷ್ಣ ಗೋಕಲೆ ಚೌಕ್ ಬಳಿ ಕೆಲವರು ಅನುಮತಿ ಪಡೆಯದೆ ವಿಜಯೋತ್ಸವ ಆಚರಿಸಿದ್ದಾರೆ.

ಅಭಿಮಾನಿಗಳು ಸಂಭ್ರಮಾಚರಣೆ ವೇಳೆ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಪಟಾಕಿ ಸಿಡಿಸಿ ಮಾಲಿನ್ಯವನ್ನು ಉಂಟುಮಾಡಿದ್ದಾರೆ. ಮಾತ್ರವಲ್ಲದೇ ಸಾರ್ವಜನಿಕ ಶಾಂತಿಗೆ ಭಂಗ ತಂದಿದ್ದಾರೆ ಎಂದು ಆರೋಪಿಸಿದ್ದು ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಳಿಕ ಸಿಸಿಟಿವಿ ದೃಶ್ಯಗಳನ್ನಾಧರಿಸಿ ಪೊಲೀಸರು ಅನುಮತಿ ಪಡೆಯದೇ ವಿಜಯೋತ್ಸವ ಆಚರಿಸಿದ 40 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಇನ್ನೂ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button