Film & EntertainmentKannada NewsKarnataka News

*ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್‌ಐಆ‌ರ್ ದಾಖಲು*

ಪ್ರಗತಿವಾಹಿನಿ ಸುದ್ದಿ : ಚಿತ್ರೀಕರಣದ ವೇಳೆ ಅವಘಡ ಸಂಭವಿಸಿ ಲೈಟ್ ಮ್ಯಾನ್ ಒಬ್ಬರು ಮೃತಪಟ್ಟಿದ್ದು ಈ ಸಂಬಂಧ ನಿರ್ದೇಶಕ ಯೋಗರಾಜ್ ಭಟ್ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ. 

ಸೆ. 3 ರಂದು ಅಡಕಮಾರನಹಳ್ಳಿ ಬಳಿ ಈ ಘಟನೆ ನಡೆದಿದ್ದು, 30 ಅಡಿ ಎತ್ತರದಿಂದ ಬಿದ್ದು ಲೈಟ್ ಮಾನ್ ಮೋಹನ್ ಕುಮಾರ್ ಸಾವನ್ನಪ್ಪಿದ್ದರು. ಮನದ ಕಡಲು ಚಿತ್ರೀಕರಣದ ವೇಳೆ ಈ ಅವಘಡ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ನಿರ್ಲಕ್ಷ್ಯ, ಅಜಾಗರೂಕತೆ, ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳದಿರುವುದು ಮುಂತಾದ ಆರೋಪಗಳ ಮೇಲೆ ದೂರು ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button