GIT add 2024-1
Kore@40
Beereshwara 33

*ಜೆ.ಪಿ.ನಡ್ಡಾ, ಬಿ.ವೈ.ವಿಜಯೇಂದ್ರ ವಿರುದ್ಧ FIR ದಾಖಲು*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನಲ್ಲಿ ಎಫ್ ಐಆರ್ ದಾಖಲಾಗಿದೆ.

ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿದ ಆರೋಪದಲ್ಲಿ ಬಿಜೆಪಿ ಜೆ.ಪಿ.ನಡ್ಡಾ, ಬಿ.ವೈ.ವಿಜಯೇಂದ್ರ ಹಾಗೂ ಅಮಿತ್ ಮಾಳವೀಯ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Emergency Service

ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ನಾಯಕರು ಪತ್ರಿಕೆಗಳಲ್ಲಿ ಜಾಹೀರಾತು ನೀಡುವ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದರು.

ಈ ಹಿನ್ನೆಲೆಯಲ್ಲಿ ಬಿಜೆಪಿಯ ಮೂವರು ನಾಯಕರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.


Laxmi Tai add
Bottom Add3
Bottom Ad 2