Kannada NewsKarnataka NewsLatest
*ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಬರ್ತ್ ಡೇ ಪಾರ್ಟಿ: ಗುಬ್ಬಚ್ಚಿ ಸೀನ ಸೇರಿ 11 ಜನರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಓರ್ವನ ಹುಟ್ಟುಹಬ್ಬ ಆಚರಣೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ್ದಕ್ಕೆ ಸುಪ್ರೀಂಕೋರ್ಟ್ ಎಲ್ಲಾ ಜೈಲಿಗಳಲ್ಲಿಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚಿಸಿತ್ತು. ಕೈದಿಗಳಿಗೆ ರಾಜಾತಿಥ್ಯದಂತಹ ಸೌಲಭ್ಯ ಕಲ್ಪಿಪಿಸಿದಲ್ಲಿ ಜೈಲಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿತ್ತು.
ಈ ಆದೇಶದ ಬಳಿಕವೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನ ಜೈಲಿನಲ್ಲಿ ಭರ್ಜರಿ ಭರ್ಟ್ ಡೇ ಪಾರ್ಟಿ ಮಾಡಿದ್ದ. ವಿಡಿಯೋ ವೈರಲ್ ಆಗುತ್ತಿದ್ದಂತೆ ಜೈಲಧಿಕಾರಿ ಸೂಚನೆ ಮೇರೆಗೆ ಗುಬ್ಬಚ್ಚಿ ಸೀನ ಸೇರಿದಂತೆ 11 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.