Kannada NewsLatestNational

*ಚಪ್ಪಲಿ ಅಂಗಡಿಯಲ್ಲಿ ಬೆಂಕಿ ಅವಘಡ: ನಾಲ್ವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಶನಿವಾರ ಸಂಜೆ ಪಾದರಕ್ಷೆಗಳ ಅಂಗಡಿಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ದಕ್ಷಿಣ ದೆಹಲಿಯ ಟಿಗ್ರಿ ಎಕ್ಸ್‌ಟೆನ್ನನ್‌ನಲ್ಲಿ ಸಂಭವಿಸಿದೆ.

 ನಾಲ್ಕು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿರುವ ಪಾದರಕ್ಷೆಗಳ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಂಗಡಿಯೊಳಗೆ ಬೆಂಕಿ ಕಾಣಿಸಿಕೊಂಡ ನಂತರ ಮೇಲಿನ ಮಹಡಿಗಳಿಗೆ ಬೆಂಕಿ ವೇಗವಾಗಿ ಹರಡಿದೆ. ಆಗ ಕಟ್ಟಡದಲ್ಲಿ ಹಲವಾರು ಜನರು ಸಿಲುಕಿಕೊಂಡಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ಬೆಂಕಿ ಹೊತ್ತಿಕೊಂಡ ಕಟ್ಟಡಕ್ಕೆ ಧಾವಿಸಿ, ಸಿಲುಕಿಕೊಂಡಿದ್ದವರನ್ನು ರಕ್ಷಿಸಿದ್ದಾರೆ. 

Home add -Advt

ಆದರೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ನಂತರ ಇಬ್ಬರು ಮಹಿಳೆಯರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ದುರದೃಷ್ಟವಶಾತ್ ಅವರಲ್ಲಿ ಒಬ್ಬರು ತೀವ್ರ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ.

ಬಲಿಯಾದವರನ್ನು ಕಟ್ಟಡದ ಮಾಲೀಕ ಸತೇಂದರ್ ಅಲಿಯಾಸ್ ಜಿಮ್ಮಿ (38) ಮತ್ತು ಅವರ ಸಹೋದರಿ ಅನಿತಾ (40) ಎಂದು ಗುರುತಿಸಲಾಗಿದೆ. ಗಾಯಗೊಂಡ ಮಹಿಳೆಯನ್ನು ಮಮತಾ (40) ಎಂದು ಗುರುತಿಸಲಾಗಿದ್ದು, ಅವರಿಗೆ ಸುಮಾರು 25% ಸುಟ್ಟ ಗಾಯಗಳಾಗಿವೆ. ಪ್ರಸ್ತುತ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದ ಮೃತ ವ್ಯಕ್ತಿಗಳನ್ನು ಇನ್ನೂ ಗುರುತಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

Back to top button