
ಪ್ರಗತಿವಾಹಿನಿ ಸುದ್ದಿ: ಫರ್ನಿಚರ್ ಅಂಗಡಿಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ದತ್ತಾತ್ರೇಯ ದೇವಸ್ಥಾನ ರಸ್ತೆಯಲ್ಲಿರುವ ಫರ್ನೀಚರ್ ಅಂಗಡಿಯಲ್ಲಿ ಇಂದು ನಸುಕಿನ ಜಾರ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿಯಲ್ಲಿದ್ದ ಮರದ ವಸ್ತುಗಳು, ಪೀಠೋಪಕರಣಗಳು ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ.
ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಸಚಿವ ದಿನೇಶ್ ಗುಂಡುರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.