Belagavi NewsBelgaum NewsKannada NewsKarnataka NewsLatest

*ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಹೊನಗಾ ಡಾಂಗೆ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಹಾಗೂ ಯಂತ್ರೋಪಕರಣಗಳು ಸುಟ್ಟು ಕರಕಲಾಗಿವೆ.

Home add -Advt

ಪ್ರಾಥಮಿಕ ವರದಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರ್ಖಾನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಪ್ಲಾಸ್ಟಿಕ್ ಕಚ್ಚಾ ವಸ್ತುಗಳು ಹಾಗೂ ಸಿದ್ಧಪಡಿಸಿದ ಉತ್ಪನ್ನಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ.

ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. 

Related Articles

Back to top button