Belagavi NewsBelgaum NewsKannada NewsKarnataka NewsNationalPolitics

*ನಾವಗೆ ಬೆಂಕಿ ಅವಘಡ: ಮೃತ ಯುವಕನ ಮನೆಗೆ ಸಚಿವೆ ಹೆಬ್ಬಾಳ್ಕರ್ ಭೇಟಿ* *ಕೈ ತುತ್ತು ತಿನ್ನಿಸಿ ಸಾಂತ್ವನ ಹೇಳಿದ ಸಚಿವರು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಹೊರವಲಯದ ನಾವಗೆಯ ಟೇಪ್ ತಯಾರಿಕಾ ಕಾರ್ಖಾನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದ ಯಲ್ಲಪ್ಪ ಗುಂಡ್ಯಾಗೋಳ ಮನಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದರು.

ಬೆಳಗಾವಿಯ ನಾವಗೆ ಕಾರ್ಖಾನೆಯ ಬೆಂಕಿ ಅವಘಡದಿಂದಾಗಿ ಬೆಳಗಾವಿಯ ಮಾರ್ಕಂಡೇಯ ನಗರದ ಯುವಕ ಯಲ್ಲಪ್ಪ ಗುಂಡ್ಯಾಗೋಳ ಮರಣಹೊಂದಿದ ಹಿನ್ನೆಲೆಯಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೃತ ಯುವಕನ ಮನೆಗೆ ಭೇಟಿ ನೀಡಿ, ತಂದೆ ತಾಯಿ‌ಗಳಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಇದೇ ವೇಳೆ ಸರ್ಕಾರದಿಂದಲೂ ಸೂಕ್ತ ಪರಿಹಾರ ಕೋಡಿಸುವುದಾಗಿ ಭರವಸೆ ನೀಡಿದರು.

Home add -Advt

ಮೃತ ಯುವಕನ ಮನೆಗೆ ಭೇಟಿ ನೀಡಿದ ಸಚಿವರು, ತಂದೆ, ತಾಯಿಯನ್ನು ಸಂತೈಸಿ, ಧೈರ್ಯ ತುಂಬಿದರು. ಇಂಥ ಘಟನೆ ನಡೆದಿರುವುದು ದುರದೃಷ್ಟಕರ, ಈ ಘಟನೆ ನಡೆಯಬಾರದಿತ್ತು. ಮೃತ ಯಲ್ಲಪ್ಪ ಕ್ರಿಯಾಶೀಲ‌ ವ್ಯಕ್ತಿಯಾಗಿದ್ದ, ಯುವಕನ ಕುಟುಂಬದೊಂದಿಗೆ ನಮ್ಮ ಕುಟುಂಬ ಸದಾ ಜೊತೆಗಿರುತ್ತದೆ ಎಂದು ಸಚಿವರು ಹೇಳಿದರು.

  • ಊಟ ತಿನ್ನಿಸಿದ ಸಚಿವರು
    ಮೃತ ಯಲ್ಲಪ್ಪ ಅವರ ತಾಯಿಯ ರೋಧನೆಯನ್ನು ಕಂಡು ಕಣ್ಣೀರು ಹಾಕಿದ ಸಚಿವರು, ಅವರಿಗೆ ಸ್ವತಃ ಊಟ ತಿನ್ನಿಸುವ ಮೂಲಕ ಸಾಂತ್ವನ ಹೇಳಿದರು. ಸಾವು-ನೋವು ಎಲ್ಲವೂ ದೇವರ ಇಚ್ಛೆ, ಇದನ್ನ ತಡೀಯೋಕೆ ಯಾರಿಂದಲೂ ಸಾಧ್ಯವಿಲ್ಲ. ದೈನಂದಿನ ಕಾರ್ಯಗಳಲ್ಲಿ ತೊಡಗಿ ಎಂದು ಧೈರ್ಯ ತುಂಬಿದರು.

ನೀವು ಯಾವುದೇ ಕಾರಣದಿಂದ ಧೈರ್ಯ ಕಳೆದುಕೊಳ್ಳಬಾರದು. ಹೆಣ್ಣು ಮಕ್ಕಳಿಗೆ ಉತ್ತಮ ಭವಿಷ್ಯ ನೀಡಿ. ಅವರನ್ನು ಚೆನ್ನಾಗಿ ಬೆಳೆಸಿ ಎಂದು ಸಚಿವರು ತಂದೆ -ತಾಯಿಯರಲ್ಲಿ ವಿನಂತಿಸಿದರು.

ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Back to top button