Karnataka NewsLatest

*ಮತ್ತೊಂದು ಅಗ್ನಿ ಅವಘಡ: ಓರ್ವ ಸಜೀವದಹನ; ಮೂವರು ಸಿಲುಕಿರುವ ಶಂಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಈ ದುರಂತ ಸಂಭವಿಸಿದೆ.

ನಗರ್ತಪೇಟೆಯ ಪ್ಲಾಸ್ಟಿಕ್ ಅಂಗಡಿಯಲ್ಲಿ ಬೆಂಕಿ ಸಂಭವಿಸಿದ್ದು, ಓರ್ವ ಸಜೀವದಹನವಾಗಿದ್ದಾರೆ. ಅಂಗಡಿಯ ಮೊದಲ ಮಹಡಿಯಲ್ಲಿ ಮೂವರು ಸಿಲುಕಿಕೊಂಡಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಬೆಂಕಿ ಅವಘಡದಲ್ಲಿ ಕಾರ್ಮಿಕ ಮದನ್ ಸಿಂಗ್ ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

Home add -Advt

Related Articles

Back to top button