*ಉಕ್ಕು ಕಾರ್ಖಾನೆಯಲ್ಲಿ ಭೀಕರ ಬೆಂಕಿ ದುರಂತ: ಮೂವರು ಎಂಜಿನಿಯರ್ ಗಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಉಕ್ಕು ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೂವರು ಎಂಜಿನಿಯರ್‌ಗಳು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಶುಕ್ರವಾರ ತಡರಾತ್ರಿ ಹೆಲಾಲ್ ಪ್ರದೇಶದಲ್ಲಿರುವ ಉಕ್ಕು ಕಾರ್ಖಾನೆಯ ಕ್ಯಾಪ್ಟಿವ್ ಪವರ್ ಪ್ಲಾಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ ಘಟಕದ ಇತರ ಭಾಗಗಳಿಗೂ ವ್ಯಾಪಿಸಿದೆ. ಘಟನೆಯಲ್ಲಿ ಒಟ್ಟು ನಾಲ್ವರು ಉದ್ಯೋಗಿಗಳು ತೀವ್ರ ಸುಟ್ಟ ಗಾಯಗಳಿಗೆ ಒಳಗಾಗಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ … Continue reading *ಉಕ್ಕು ಕಾರ್ಖಾನೆಯಲ್ಲಿ ಭೀಕರ ಬೆಂಕಿ ದುರಂತ: ಮೂವರು ಎಂಜಿನಿಯರ್ ಗಳು ದುರ್ಮರಣ*