
ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿ ಪೂಜೆ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿ ಮೂವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದಿದೆ.
ಇಲ್ಲಿನ ಅಲುಬೇರಿಯಾ ಪಟ್ಟಣದ ಮನೆಯೊಂದರಲ್ಲಿ ಕಾಳಿ ಪೂಜೆ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮೂವರು ಮಕ್ಕಳುಸಾವನ್ನಪ್ಪಿದ್ದಾರೆ. 9 ವರ್ಷ ಹಾಗೂ 14 ವರ್ಷದ ಹಾಗೂ ಎರಡುವರೆ ವರ್ಷದ ಮಕ್ಕಳು ಬಲಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ್ದರು. ತನಿಖೆ ಮುಂದುವರೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ