ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಆರ್.ಟಿ.ನಗರದಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಕಟ್ಟಡದ ಒಳಗೆ 10ಕ್ಕೂ ಹೆಚ್ಚು ಜನರು ಸಿಲುಕಿದ್ದು, ಘಟನಾ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಕಟ್ಟಡದಲ್ಲಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪಕ್ಕದ ಕಟ್ಟಡಕ್ಕೆ ಏಣಿಹಾಕಿ ಅಲ್ಲಿಂದ ಬೆಂಕಿ ಅವಘಡ ಸಂಭವಿಸಿರುವ ಕಟ್ಟಡದಲ್ಲಿರುವವರನ್ನು ಹೊರಗೆ ಕರೆದುಕೊಂಡುಬರುವ ಕಾರ್ಯ ನಡೆಯುತ್ತಿದೆ.
ಮಿರಾಕಲ್ ಡ್ರಿಂಕ್ಸ್ ಕಟ್ಟಡದ ಕೆಳಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ