ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಮೆಡಿಸಿನ್ ಫ್ಯಾಕ್ಟರಿಗೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಪೀಣ್ಯದ ಕರಿಬೊಮ್ಮನಹಳ್ಳಿಯಲ್ಲಿ ನಡೆದಿದೆ.
ವೆಟ್ ನೀಡ್ಸ್ ಲ್ಯಾಬ್ ಎಂಬ ಮೆಡಿಸಿನ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಎರಡು ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿರುವ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ನಿವೃತ್ತ ಪ್ರಾಚಾರ್ಯ ಕನಗಣ್ಣಿ ನಿಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ