Kannada NewsLatestNational

*ರಾಜಧಾನಿಯ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ: ಕನಿಷ್ಠ 20 ಜನರ ಸಾವು*

ಪ್ರಗತಿವಾಹಿನಿ ಸುದ್ದಿ: ಪ್ರಸಿದ್ದ ‘ಲೆಮನ್ ಗ್ರೀನ್ ರೆಸ್ಟೋರೆಂಟ್‌ನಲ್ಲಿ  ಇಂದು ಬೆಳ್ಳಂ ಬೆಳಗ್ಗೆ ಭೀಕರ ಅಗ್ನಿಅವಘಡ ಸಂಭವಿಸಿ ಕನಿಷ್ಠ 20 ಜನರು ಜೀವ ಕಳೆದುಕೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದೆ.

ಇಂದು ಬೆಳಗ್ಗೆ ಸುಮಾರು 8:50ರ ವೇಳೆಗೆ ಈ ದುರ್ಘಟನೆ ನಡೆದಿದೆ. ರೆಸ್ಟೋರೆಂಟ್‌ನ ನೆಲಮಾಳಿಗೆಯಲ್ಲಿ ಈ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. 

Home add -Advt

ಘಟನೆಯಲ್ಲಿ 20 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 30ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಕೆಲವರು ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಕೆಳಗೆ ಹಾರಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಹಲವು ವಾಹನಗಳ ಸಹಾಯದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿ ಕಟ್ಟಡದೊಳಗೆ ಸಿಲುಕಿಕೊಂಡಿದ್ದ ಹಲವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಐದು ಅಂತಸ್ತಿನ ಈ ಹೋಟೆಲ್‌ನಲ್ಲಿ ಸುಮಾರು 25 ಕೊಠಡಿಗಳಿದ್ದು, ಅವಘಡದ ಸಮಯದಲ್ಲಿ ಸುಮಾರು 50ಕ್ಕೂ ಅಧಿಕ ಮಂದಿ ಇದ್ದರು ಎಂದು ಅಂದಾಜಿಸಲಾಗಿದೆ. ಇವರಲ್ಲಿ ಹೆಚ್ಚಿನವರು ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ವಿದೇಶಿ ಪ್ರಜೆಗಳಾಗಿದ್ದರು. 

ಬೆಂಕಿ ಹರಡುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಮತ್ತು ಹೋಟೆಲ್ ಸಿಬ್ಬಂದಿ ಅಗ್ನಿಶಾಮಕ ದಳದೊಂದಿಗೆ ಕೈಜೋಡಿಸಿ, ಸಿಲುಕಿಕೊಂಡಿದ್ದ ಜನರನ್ನು ಸುರಕ್ಷಿತವಾಗಿ ಹೊರಗೆ ಕರೆತರಲು ಹರಸಾಹಸ ಪಟ್ಟರು. 

ಗಾಯಗೊಂಡವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯಕ್ಕೆ ಬೆಂಕಿ ಸಂಪೂರ್ಣವಾಗಿ ಹತೋಟಿಗೆ ಬಂದಿದ್ದು, ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಮತ್ತು ಅಗ್ನಿಶಾಮಕ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಆರ್ಥಿಕ ನೆರವು ನೀಡುವುದಾಗಿ ಪಿಎಂಒ ಘೋಷಿಸಿದ್ದು, ಘಟನೆಯಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದೆ.

Related Articles

Back to top button