Latest

*ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 7ಜನರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ : ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಒಂದು ಮಗು ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ದಿಂಡಿಗಲ್ ನಗರದಲ್ಲಿ ನಡೆದಿದೆ.

ದಿಂಡಿಗಲ್ ನಗರದ ತಿರುಚ್ಚಿ ರಸ್ತೆಯಲ್ಲಿರುವ ಸಿಟಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲಿಫ್ಟ್ ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಅನೇಕರು ಪತ್ತೆಯಾಗಿದ್ದು, ಅಲ್ಲಿಯೇ ಸಾವನಪ್ಪಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ.

ಬೆಂಕಿ ಅವಘಡದ ಬಗ್ಗೆ ಮಾಹಿತಿ ಪಡೆದ ಕೂಡಲೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ನೂರಕ್ಕೂ ಹೆಚ್ಚು ರೋಗಿಗಳು ಒಳಗೆ ಸಿಲುಕಿಕೊಂಡಿದ್ದು, ಅವರನ್ನು ಸ್ಥಳಾಂತರಿಸಲಾಗಿದೆ. ಈ ಆಸ್ಪತ್ರೆಯು ನಾಲ್ಕು ಮಹಡಿಗಳನ್ನು ಹೊಂದಿದೆ. ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಖಾಸಗಿ ಆಂಬ್ಯುಲೆನ್ಸ್ ಸೇರಿದಂತೆ 50 ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ಕರೆಸಲಾಗಿತ್ತು. ಕೆಲವೆ ಗಂಟೆಗಳಲ್ಲಿ ಎಲ್ಲವನ್ನ ಹತೋಟಿಗೆ ತರಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button