CrimeKannada NewsKarnataka News

*ಕುರಿಗಳ ಶೆಡ್‌ಗೆ ಬೆಂಕಿ*: *300ಕ್ಕೂ ಹೆಚ್ಚು ಕುರಿಗಳು ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ: ಕುರಿಗಳ ಶೆಡ್‌ಗೆ ಏಕಾಏಕಿ ಬೆಂಕಿ ತಗುಲಿದ ಪರಿಣಾಮ 300ಕ್ಕೂ ಹೆಚ್ಚು ಕುರಿಗಳು ಸಜೀವ ದಹನಗೊಂಡಿರುವ ಹೃದಯವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಸಂಭವಿಸಿದೆ.

ಗ್ರಾಮದ ರೈತ ರಾಮಣ್ಣ ಅವರಿಗೆ ಸೇರಿದ ಕುರಿಗಳ ಶೆಡ್‌ನಲ್ಲಿ ಮಧ್ಯರಾತ್ರಿ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಶೆಡ್‌ಗೆ ವ್ಯಾಪಿಸಿದ್ದು, ಒಳಗಿದ್ದ ಕುರಿಗಳು ಹೊರಬರಲಾಗದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿವೆ. ಪರಿಣಾಮ 300ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.

ಕುರಿ ಸಾಕಾಣಿಕೆಯನ್ನೇ ಜೀವನಾಧಾರವಾಗಿಸಿಕೊಂಡಿದ್ದ ರಾಮಣ್ಣ ಅವರು ಈ ದುರಂತದಿಂದ ಕಂಗಾಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಕುರಿಗಳನ್ನು ಒಂದೇ ರಾತ್ರಿಯಲ್ಲಿ ಕಳೆದುಕೊಂಡಿದ್ದು, ಕುಟುಂಬಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ.

ಘಟನೆಗೆ ಸಂಬಂಧಿಸಿದಂತೆ ರೈತ ರಾಮಣ್ಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶೆಡ್‌ಗೆ ಬೆಂಕಿ ತಗುಲಲು ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related Articles

Back to top button