*ಚಲಿಸುತ್ತಿದ್ದ ಲಾರಿಯಲ್ಲಿ ಕಾಣಿಸಿಕೊಂಡ ಬೆಂಕಿ: 620 ಚೀಲ ಗೋವಿನಜೋಳ ಸುಟ್ಟು ಭಸ್ಮ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಲಿಸುತ್ತಿದ್ದ ಲಾರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ನೂರಾರು ಚೀಲ ಗೋವಿನಜೋಳ ಸಂಪೂರ್ಣ ಸುಟ್ಟ ಕರಕಲಾಗಿದ್ದು, ಚಾಲಕ ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಭೀಕರ ಅಗ್ನಿ ದುರಂತ ನಡೆದಿದೆ. ನರಗುಂದದಿಂದ ಬೆಳಗಾವಿ ಕಡೆಗೆ 620 ಚೀಲ ಗೋವಿನಜೋಳ ತುಂಬಿಕೊಂಡು ಬರುತ್ತಿದ್ದ ಟ್ರಕ್, ಬೈಲಹೊಂಗಲ ತಾಲೂಕಿನ ಯರಡಾಲ ಕ್ರಾಸ್ ಬಳಿ ಬರುತ್ತಿದ್ದಂತೆ ಬೆಂಕಿಗೆ ಆಹುತಿಯಾಗಿದೆ.  ಹುಬ್ಬಳ್ಳಿ ಮೂಲದ ಶರೀಫ ಅಹ್ಮದ್ ಮುಲ್ಲಾ ಅವರಿಗೆ ಸೇರಿದ ಈ ಟ್ರಕ್‌ನಲ್ಲಿ, ಬ್ಯಾಟರಿ … Continue reading *ಚಲಿಸುತ್ತಿದ್ದ ಲಾರಿಯಲ್ಲಿ ಕಾಣಿಸಿಕೊಂಡ ಬೆಂಕಿ: 620 ಚೀಲ ಗೋವಿನಜೋಳ ಸುಟ್ಟು ಭಸ್ಮ*