Kannada NewsKarnataka NewsNationalTravel
*ಖಾಸಗಿ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ: 20 ಜನ ಪ್ರಯಾಣಿಕರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟಿರುವ ಪರಿಣಾಮ 20 ಜನ ಪ್ರಯಾಣಿಕರು ಸಾವನ್ನಪ್ಪಿರುವ ದುರಂತ ರಾಜಸ್ಥಾನದ ಜೈಸಲ್ವೇರ್-ಜೋಧಪುರ ಹೆದ್ದಾರಿಯಲ್ಲಿ ನಡೆದಿದೆ.
ಜೈಸಲ್ವೇರ್‌ನಿಂದ ಜೋಧಪುರಕ್ಕೆ 57 ಜನರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಗಮನಿಸಿದ ಚಾಲಕ ಬಸ್ ಅನ್ನು ರಸ್ತೆಬದಿಯಲ್ಲಿ ನಿಲ್ಲಿಸಿದ್ದಾನೆ. ಆದರೆ ಅಷ್ಟರಲ್ಲಿ ಬೆಂಕಿ ಸಂಪೂರ್ಣ ಬಸ್ ಅನ್ನು ಆವರಿಸಿದೆ
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ತಕ್ಷಣವೇ ಸ್ಥಳೀಯರು ಮತ್ತು ದಾರಿಹೋಕರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ಅಲ್ಲದೇ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಯಿತು. ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಜೈಸಲ್ಮರ್‌ನ ಜವಾಹರ್ ಆಸ್ಪತ್ರೆಗೆ ರವಾನಿಸಲಾಗಿದೆ.