Kannada NewsKarnataka NewsPolitics

*BREAKING: ತುಳು ಭಾಷೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಎಂದು ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕಡಲ ನಗರಿ ಮಂಗಳೂರಿನಲ್ಲಿ ರಾಜ್ಯ ವಿಶೇಷ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಕರಾವಳಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸುಮಾರು 40 ವಿಚಾರಗಳನ್ನು ಚರ್ಚೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೇ ಎಂದು ಘೋಷಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ತುಳು ಭಾಷೇಗೆ ಮಾನ್ಯತೆ ಸಿಗಬೇಕು ಎಂಬುದು ಹಲವು ವರ್ಷಗಳಿಂದ ಈ ಭಾಗದ ಜನರ ಒತ್ತಾಯವಾಗಿತ್ತು. ಹಿಂದಿನ ಬಿಜೆಪಿ ಸರ್ಕಾರ ಈ ಬಗ್ಗೆ ಯಾಕೆ ನಿರ್ಣಯ ಕೈಗೊಳ್ಳಲಿಲ್ಲ ಎಂದು ನಾವು ಚರ್ಚೆ ಮಾಡಲು ಹೋಗಲ್ಲ. ಆದರೆ ನಮ್ಮ ಸರ್ಕಾರ ತುಳು ಭಾಷೇಗೆ ಮಾನ್ಯತೆ ನಿಡಲು ನಿರ್ಧರಿಸಿದೆ. ರಾಜ್ಯದ 2ನೇ ಹೆಚ್ಚುವರಿ ಭಾಷೆ ತುಳು ಎಂದು ಪರಿಗಣಿಸಲು ಸಚಿವ ಸಂಪುಟ ಸಭೆ ಅನುಮೋದಿಸಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಘೋಷಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button