
ಪ್ರಗತಿವಾಹಿನಿ ಸುದ್ದಿ: ತಾಯಿ-ಮಗ ಇಬ್ಬರೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದೆ.
ಇಲ್ಲಿನ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗ್ರಾಮದ ಕೋಳಿಫಾರಂ ನಲ್ಲಿ ತಾಯಿ-ಮಗ ಇಬ್ಬರೂ ಸೀಮೆ ಎಣ್ಣೆ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾರೆ.
ತಾಯಿ ರಶ್ಮಿಪ್ರಿಯಾ (34) ಹಾಗೂ ಮಗ ಪ್ರಭಾತ್ (7) ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.