Kannada NewsKarnataka News

*ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ: 179 ಪ್ರಯಾಣಿಕರು ಪಾರು*

ಪ್ರಗತಿವಾಹಿನಿ ಸುದ್ದಿ: ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಬಲ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ದೊಡ್ಡ ದುರಂತ ಸ್ವಲ್ಪದರಲ್ಲೆ ತಪ್ಪಿದೆ.  

Home add -Advt

ಶನಿವಾರ ರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೊಚ್ಚಿಗೆ 179 ಜನರನ್ನು ಹೊತ್ತು ಸಾಗುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಟೇಕ್ ಆಫ್ ಆದ ಕೂಡಲೆ ವಿಮಾನದ ಬಲ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡಿದೆ.‌ ಎಂಜಿನ್ ನಲ್ಲಿ ಬೆಂಕಿ ನೋಡಿದ ಪ್ರಯಾಣಿಕರು ಒಂದು ಕ್ಷಣ ಗಾಬರಿ ಆಗಿದ್ದಾರೆ.‌ ಪ್ರಯಾಣಿಕರನ್ನು ಏರ್ ಇಂಡಿಯಾ ಸಿಬ್ಬಂದಿ ಸಮಾಧಾನ ಮಾಡಿದ್ದಾರೆ. ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

ವಿಮಾನದಲ್ಲಿ ಬೆಂಗಳೂರಿನಿಂದ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ಇದ್ದರು, ಯಾವುದೇ ಅಪಾಯಗಳಿಲ್ಲದೆ ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ವಿಮಾನ ಲ್ಯಾಂಡಿಂಗ್ ಆದ ತಕ್ಷಣ ಬೆಂಕಿಯನ್ನು ನಂದಿಸಲಾಗಿದೆ. ಎಲ್ಲಾ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ಸುರಕ್ಷಿತಾಗಿದ್ದಾರೆ ಎಂದು ತಿಳಿದು ಬಂದಿದೆ.‌

Related Articles

Back to top button