*ಸಿಡಿಮದ್ದು ತಯಾರಿಕಾ ಘಟಕ ಏಕಾಏಕಿ ಸ್ಫೋಟ; ಇಬ್ಬರು ಮಹಿಳೆಯರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಏಕಾಏಜಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿ ಮೂರು ಪ್ರತ್ಯೇಕ ಘಟಕಗಳಲ್ಲಿ ಸಿಡಿಮದ್ದು ತಯಾರಿಸಲಾಗುತ್ತಿತ್ತು. ಈ ವೇಳೆ ಒಂದು ಕಟ್ಟಡದಲ್ಲಿ ಸ್ಫೋಟ ಸಂಭವಿಸಿದೆ. ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳು ಮಹಿಳೆಯರನ್ನು ಕಾರ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ನಗರ ಪೊಲೀ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ಲೋಕಸಭಾ ಚುನಾವಣೆ-2024: ಮತದಾನ ಹೆಚ್ಚಳ*