
ಪ್ರಗತಿವಾಹಿನಿ ಸುದ್ದಿ: ಪಟಾಕಿ ಕಾರ್ಖಾನೆಯಲ್ಲಿ ಏಕಾಏಕಿ ಸ್ಫೋಟ ಸಂಭವಿಸಿ ಎಂಟು ಜನರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ನಡೆದಿದೆ.
ಕೋಟಾವರ್ತುಲ ತಾಲೂಕಿನ ಕೈಲಾಸಪಟ್ಟಣಂ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿ ಎಂಟು ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದ್ಆಖಲಿಸಲಾಗಿದೆ.
ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ತೀವ್ರ ಗಂಭೀರವಾಗಿದೆ. ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.