VTU Add
Beereshwara 36
LaxmiTai 5

*ಪಟಾಕಿ ಗೋದಾಮಿನಲ್ಲಿ ಸ್ಫೋಟ; 10 ಜನರು ದುರ್ಮರಣ*

Anvekar 3

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘೋರ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ.

ಮೃತರನ್ನು ಗೋಡೌನ್ ಮಾಲೀಕ ರವಿ, ಪತ್ನಿ ಜಯಶ್ರೀ, ಅವರ ಪುತ್ರಿ ಋತಿಕ, ಮಗ ರುತೇಶ್ ಸೇರಿದಂತೆ 10 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ದುರಂತದಲ್ಲಿ ಗೋದಾಮಿನ ಪಕ್ಕದಲ್ಲಿ ರೆಸ್ಟೋರೆಂಟ್ ನಡೆಸುತ್ತಿದ್ದ ರಾಜೇಶ್ವರಿ ಹಾಗೂ ವೆಲ್ ಡಿಂಗ್ ಶಾಪ್ ನ ಇಬ್ರಾಹಿಮ್ ಎಂಬುವವರೂ ಸಾವನ್ನಪ್ಪಿದ್ದಾರೆ. ಸ್ಫೋಟದ ರಭಸಕ್ಕೆ ಇಡೀ ಕಟ್ಟಡವೇ ಕುಸಿದಿದ್ದು, ಕಟ್ಟದಲ್ಲಿ ಸಿಲುಕಿರುವವರ ರಕ್ಷಣೆಗಾಗಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

Cancer Hospital 2
Emergency Service

15 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಕೃಷ್ಣಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಅವಶೇಷಗಳಡಿ 5 ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ಹೊರತೆಗೆಯುವ ಕಾರ್ಯ ನಡೆದಿದೆ.


Bottom Add3
Bottom Ad 2