ಪ್ರಗತಿವಾಹಿನಿ ಸುದ್ದಿ: ಶೆಡ್ ಮೇಲೆ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ತಾಯಿ-ಮಗಳು ಸಜೀವದಹನವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ನಡೆದಿದೆ.
ಜೈಬಾನ್ (55), ಶಬಾನ್ (25) ಮೃತ ಮಹಿಳೆಯರು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಪೆಟ್ರೋಲ್ ತುಂಬಿಸಿ ದುಷ್ಕರ್ಮಿಗಳು ಶೆಡ್ ಮೇಲೆ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಶೆಡ್ ಸಂಪೂರ್ಣ ಸುಟ್ಟು ಕರಕಲಾಗಿದೆ. ತಾಯಿ-ಮಗಳು ಸಾವನ್ನಪ್ಪಿದ್ದಾರೆ. ದಸ್ತಗಿರಿಸಾಬ್, ಸುಬಾನ್, ಸಿದ್ದಕಿ ಎಂಬ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಮಹಾಲಿಂಗಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ