Belagavi NewsBelgaum NewsKannada NewsKarnataka News

*ಯುವಕನ ಮೇಲೆ ದುಷ್ಕರ್ಮಿಗಳಿಂದ ಫೈರಿಂಗ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಯುವಕನ ಮೇಲೆ ಎರಡು ಸುತ್ತು ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಬೆಳಗಾವಿಯ ಮಹಾಂತೇಶ ನಗರದ ನಂದಿನಿ ಡೈರಿ ಬಳಿ ನಡೆದಿದೆ. 

ಯುವನಕನ ಮೇಲೆ ಗುಂಡು ಹಾರಿಸಿ ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ.‌ ಬೆಳಗಾವಿ ಟಿಳಕವಾಡಿಯ ನಿವಾಸಿ ಪ್ರನೀತ್ ಕುಮಾರ (31) ಎಂಬಾತ ಮಹಾಂತೇಶ ನಗರದ ಕಡೆ ಬಂದಿದೆ ಈ ವೇಳೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿದ್ದಾರೆ.‌ ಗಾಯಾಳು ಯುವಕನಿಗೆ ಬಿಮ್ಸ್ ನ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.‌ ತೊಡೆ ಹಾಗೂ ಗಲ್ಲಕ್ಕೆ ಗುಂಡು ತಗುಲಿ ಪುನಿತ ಗಂಭೀರವಾಗಿ ಗಾಯಗೊಂಡಿದ್ದಾನೆ.‌ ಇನ್ನೂ ದೇಹಕ್ಕೆ ತಾಗಿದ ಗುಂಡುಗಳನ್ನು ಜೇಬಿನಲ್ಲಿ ಇಟ್ಟುಕೊಂಡು ಗಾಯಾಳು ಆಸ್ಪತ್ರೆಗೆ ಬಂದಿದ್ದಾನೆ.‌

ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನ ಮೇಲೆ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇದೊಂದು ಪ್ರೇಮ ಪ್ರಕರಣವಿರಬಹುದೆನ್ನುವ ಶಂಕೆಯನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಮಾಳಮಾರುತಿ ಠಾಣೆಯ ಎಸಿಪಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‌ ಬಳಿಕ ಯುವಕ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಆಗಮಿಸಿ, ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರೋ ಗಾಯಾಳುವಿನ ಆರೋಗ್ಯ ವಿಚಾರಣೆ ನಡೆಸಿದ್ದಾರೆ.‌

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button