ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಜ.23ರಂದು ನಡೆದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದೆ. ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ವಾಟ್ಸಾಪ್ ನಲ್ಲಿ ಹರಿದಾಡಿತ್ತು. ಈ ಬಗ್ಗೆ ವಿವಿ ಚೇರ್ಮನ್ ಡಾ.ವಿಶ್ವನಾಥ್ ಸೈಬರ್ ಕ್ರೈಂಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ