CrimeKarnataka NewsLatest

*ಮಹಿಳಾ ಕಸ್ಟಮ್ ಅಧಿಕಾರಿಗೆ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ: ಉದ್ಯಮಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಕಸ್ಟಮ್ ಅಧಿಕಾರಿಗೆ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರವೆಸಗಿದ ಆರೋಪದಲ್ಲಿ ಉದ್ಯಮಿಯೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.

ಎಂ.ಕೃಪಲಾನಿ ಬಂಧಿತ ಆರೋಪಿ. ಬೆಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳಾ ಅಧಿಕಾರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಹೇಳಿದಂತೆ ಕೇಳದಿದ್ದರೆ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆಡರಿಕೆ ಹಾಕಿದ್ದ. ಕೃಪಲಾನಿ ಕಿರುಕುಳಕ್ಕೆ ಬೇಸತ್ತು ಕೊನೆಗೂ ಈ ಬಗ್ಗೆ ಮಹಿಳಾ ಅಧಿಕಾರಿ ದೂರು ನೀಡಿದ್ದು, ಯಲಹಂಕ ಠಾಣೆಯಲ್ಲಿ ಈತನ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ್ದರು.

Home add -Advt

ಬಳಿಕ ಇಂದಿರಾನಗರ ಪೊಲೀಸ್ ಠಾಣೆಗೆ ಕೇಸ್​​ ವರ್ಗಾವಣೆಗೊಂಡಿತ್ತು. ಈ ಬಗ್ಗೆ ತನಿಖೆಗೆ ಪುಲಕೇಶಿನಗರ ಎಸಿಪಿ ಹಾಗೂ ಪಿಐಗೆ ಅಧಿಕಾರಿಗಳು ಸೂಚಿಸಿದ್ದರು. ಆ ಹಿನ್ನೆಲೆ ಆರೋಪಿ ಕೃಪಲಾನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರ ಅಲ್ಲದೇ ಆರೋಪಿ ಮೇಲೆ ಇನ್ನಷ್ಟು ಗಂಭೀರ ಆರೋಪಗಳನ್ನು ಮಹಿಳಾ ಅಧಿಕಾರಿ ಮಾಡಿದ್ದು, ಎಲೆಕ್ಟ್ರಾನಿಕ್ ಬ್ಯುಸಿನೆಸ್ ನಡೆಸುತ್ತಿದ್ದ ಕೃಪಲಾನಿ ಕಸ್ಟಮ್ ಕಣ್ತಪ್ಪಿಸಿ ಸಾಕಷ್ಟು ವ್ಯವಹಾರ ನಡೆಸ್ತಿದ್ದ ಆರೋಪ ಕೇಳಿಬಂದಿದೆ.

ಈತನಿಗೆ 9 ವರ್ಷದ ಹಿಂದೆ ಮಹಿಳಾ ಕಸ್ಟಮ್ ಅಧಿಕಾರಿ ಪರಿಚಯವಾಗಿದ್ದು, ಆಕೆ ಜೊತೆಗೆ ಪ್ರೀತಿ ನಾಟಕವಾಡಿ ಸಲುಗೆ ಬೆಳೆಸಿಕೊಂಡಿದ್ದ. ಅಲ್ಲದೆ ಮದುವೆ ಆಮೀಷವೊಡ್ಡಿ ಕೆಲಸದ ಕೆಲ ಲೂಪ್ ಹೋಲ್ ತಿಳಿದಿದ್ದ. ಆಕೆ ಬಳಸಿಕೊಂಡು ಕೆಲ ಕಸ್ಟಮ್ ಅಧಿಕಾರಿಗಳ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಹಣ ಕೂಡ ಪಡೆದಿದ್ದ ಎನ್ನಲಾಗಿದೆ.

ಈ ಹಿಂದೆ ತನ್ನ ಮಗ ನಾಪತ್ತೆಯಾಗಿದ್ದಾನೆಂದು ಕೃಪಲಾನಿ ತಾಯಿ ನ್ಯಾಯಾಲಯಕ್ಕೆ ಹೇಬಿಯಸ್ ಕಾರ್ಪಸ್ ಅರ್ಜಿ ಹಾಕಿದ್ದರು. ಆದರೆ ಕೃಪಲಾನಿ ಉದ್ದೇಶ ಪೂರ್ವಕವಾಗಿ ಹೊಟೆಲ್​ನಲ್ಲಿ ಅಡಗಿರೋದು ಈ ವೇಳೆ ಪತ್ತೆ ಆಗಿತ್ತು. ಹೀಗಾಗಿ ಈ ವೇಳೆ ಕೃಪಲಾನಿಗೆ ಕೋರ್ಟ್ ಎರಡು ಲಕ್ಷ ರೂ. ದಂಡ ಕೂಡ ವಿಧಿಸಿತ್ತು. ಇಷ್ಟು ಸಾಲದ್ದಕ್ಕೆ ದಶಕದ ಹಿಂದೆ ಕುಡಿದು ಮಹಿಳಾ ಅಧಿಕಾರಿಗಳ ಜತೆ ಅಸಭ್ಯ ವರ್ತನೆ ಆರೋಪವೂ ಈತನಮೇಲಿದೆ. ಕೃಪಲಾನಿ ಜಾಲಕ್ಕೆ ಸಿಲುಕಿ ಹಲವು ಕಸ್ಟಮ್ಸ್ ಅಧಿಕಾರಿಗಳು ನರಳಿದ್ದಾರೆ ಎನ್ನಲಾಗಿದ್ದು, ಆ ಕಾರಣ ಈತನಿಂದ ಅನ್ಯಾಯವಾಗಿದ್ರೆ ದೂರು ನೀಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

Related Articles

Back to top button