ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ಕೊಡಬೇಕು. ಎಷ್ಟೇ ಕಷ್ಟವಾದರೂ ಅವರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಡಿ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕರೆ ನೀಡಿದ್ದಾರೆ.
ಹಿಂಡಲಗಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯದ ಕೊರತೆಯಿಂದಾಗಿ ಯಾರೊಬ್ಬರೂ ಶಿಕ್ಷಣದಿಂದ ಹಿಂದೆ ಸರಿಯಬಾರದು. ಈ ಕಾರಣಕ್ಕಾಗಿಯೇ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಸರಕಾರದಿಂದ ಅಷ್ಟೆ ಅಲ್ಲದೆ ಅಗತ್ಯವಾದವರಿಗೆ ವಯಕ್ತಿಕವಾಗಿಯೂ ಕೂಡ ನೆರವನ್ನು ಕಲ್ಪಿಸುತ್ತಿದ್ದೇನೆ ಎಂದು ಹೆಬ್ಬಾಳಕರ್ ತಿಳಿಸಿದರು.
ಶಾಲೆಯ ಕುಂದುಕೊರತೆಗಳ ಕುರಿತು ಗ್ರಾಮಸ್ಥರೊಂದಿಗೆ ಸುದೀರ್ಘವಾಗಿ ಚರ್ಚಿಸಿದ ಶಾಸಕಿ, ಮಕ್ಕಳ ವಿದ್ಯಾಭ್ಯಾಸ ಮತ್ತು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಪಾಲಕರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮಸ್ಥರು, ಶಾಲಾ ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು, ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುಳಗಾ ಶಾಲೆಗೆ ಭೇಟಿ
ಇದೇ ವೇಳೆ ಸುಳಗಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಭೇಟಿ ನೀಡಿದ ಲಕ್ಷ್ಮಿ ಹೆಬ್ಬಾಳಕರ್, ಕುಂದು ಕೊರತೆಗಳ ಕುರಿತು ಚರ್ಚಿಸಿದರು.
ಶಾಲೆಗೆ ಬೇಕಾಗುವ ಎಲ್ಲ ತರಹದ ವ್ಯವಸ್ಥೆಗಳನ್ನು ಮಾಡಿಕೊಡುವುದಾಗಿ ಭರವಸೆ ನೀಡಿದ ಶಾಸಕರು, ಅಗತ್ಯತೆಗಳ ಪಟ್ಟಿ ತಯಾರಿಸಿ ಕೊಡುವಂತೆ ಸೂಚಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ