Belagavi NewsBelgaum NewsKannada NewsKarnataka NewsLatest

2 ಕೋಟಿ ರೂ. ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಾಂಬ್ರಾ ಗ್ರಾಮದಲ್ಲಿ ಸುಮಾರು 2 ಕೋಟಿ ರೂ,ಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಸಂಜೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

Home add -Advt

ಕಾಂಕ್ರೀಟ್ ಹಾಗೂ ಡಾಂಬರ್ ರಸ್ತೆ, ಪೇವರ್ಸ್ ಅಳವಡಿಕೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕರ ಆಸ್ತಿಗಳಿಗೆ ಯಾವುದೇ ತೊಂದರೆಗಳಾಗದಂತೆ ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ಸಚಿವರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.

Related Articles

Back to top button