*ಕೆಎಲ್‌ಇ ನಿರ್ದೇಶಕ ಮಂಡಳಿಗೆ ಮೊದಲ ಬಾರಿಗೆ ಮಹಿಳೆಯೊಬ್ಬರ ಪ್ರವೇಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೆಎಲ್ಇ ಸಂಸ್ಥೆಯ ಇತಿಹಾಸದಲ್ಲೇ ಮೊದಲ ಬಾರಿಗೆ ನಿರ್ದೇಶಕ ಮಂಡಳಿಗೆ ಮಹಿಳೆಯೊಬ್ಬರು ಪ್ರವೇಶಿಸಿದ್ದಾರೆ. ಡಾ.ಪ್ರಭಾಕರ ಕೋರೆಯವರ ಪುತ್ರಿ ಪ್ರೀತಿ ದೊಡವಾದ ನಿರ್ದೇಶಕ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ನೂತನ ದಾಖಲೆ ನಿರ್ಮಿಸಿದ್ದಾರೆ. ಪ್ರೀತಿ ಕೋರೆ ಕಳೆದ ಹಲವು ವರ್ಷಗಳಿಂದ ಸಂಸ್ಥೆಯಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತ ಬಂದಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ನಿರ್ದೇಶಕ ಮಂಡಳಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಬಾರಿ ಎಲ್ಲ ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆಯಾಗಿ ಮತ್ತೊಂದು ಇತಿಹಾಸ ಸೃಷ್ಟಿಯಾಗಿದೆ. ನಾಮಪತ್ರ ಹಿಂಪಡೆಯುವ ಅಂತಿಮ ದಿನವಾಗಿದ್ದ ಗುರುವಾರ ಅಧ್ಯಕ್ಷ, ಉಪಾಧ್ಯಕ್ಷ … Continue reading *ಕೆಎಲ್‌ಇ ನಿರ್ದೇಶಕ ಮಂಡಳಿಗೆ ಮೊದಲ ಬಾರಿಗೆ ಮಹಿಳೆಯೊಬ್ಬರ ಪ್ರವೇಶ*