ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಳಿ ದೇವಿಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಪ್ರಸಿದ್ಧ ಸಾಮಾಜಿಕ ಜಾಲತಾಣ ಟ್ವಿಟರ್ ಸಂಸ್ಥೆ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಕಿರಣ್ ಆರಾಧ್ಯ ಎಂಬುವವರು ನೀಡಿದ ದೂರಿನ ಅನ್ವಯ ಟ್ವಿಟರ್ ಸಂಸ್ಥೆ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲು ಮಾಡಲಾಗಿದೆ.
ಅರಮಿನ್ ನವಾಬಿ ಎಂಬ ಟ್ವಿಟರ್ ಖಾತೆಯಿಂದ ಕಾಳಿಕಾ ದೇವಿಯ ಬಗ್ಗೆ ಅಶ್ಲೀಲ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ತೆಗೆಯುವಂತೆ ಕಿರಣ್ ಆರಾಧ್ಯ ಟ್ವಿಟರ್ ಸಂಸ್ಥೆಗೆ ಮನವಿ ಮಾಡಿದ್ದರು. ಆದರೆ ಪೋಸ್ಟ್ ತೆಗೆದಯ ಹಿನ್ನೆಲೆಯಲ್ಲಿ ಕಿರಣ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೀಗ ನ್ಯಯಾಅಲಯದ ಸೂಚನೆ ಮೇರೆಗೆ ಅರ್ಮಿನ್ ನವಾಬಿ, ಟ್ವಿಟರ್ ಸಿಇಒ ಜಾಕ್ ಡೋರ್ಸಿ ಹಾಗೂ ಭಾರತದ ಮೂವರು ಟ್ವಿಅರ್ ನಿರ್ದೇಶಕರಾದ ಮಹೀಮ್ ಕೌಲ್, ಮನೀಷ್ ಮಹೇಶ್ವರಿ ಮಾಯ ಹರಿ ಸೇರಿ 7 ಜನರ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ