Belagavi NewsBelgaum NewsKannada NewsKarnataka News

*ಮೀನುಗಾರರು ಈ ಕೂಡಲೇ ಈ ಕೆಲಸ ಮಾಡಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2025-26 ನೇ ಸಾಲಿನ ಮೀನುಗಾರಿಕೆ ಇಲಾಖೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದಡಿಯಲ್ಲಿ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರದ ವಾಹನ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.

ರಾಜ್ಯ ವಲಯದಡಿ, ಬೆಳಗಾವಿ ಜಿಲ್ಲೆಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ಸದರಿ ಯೋಜನೆಯಡಿಯಲ್ಲಿ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50 ರಷ್ಟು ಅಥವಾ ಗರಿಷ್ಟ ರೂ.3.00 ಲಕ್ಷ ಆರ್ಥಿಕ ಸಹಾಯಧನ ಪಡೆಯಲು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ಅಗತ್ಯ ದಾಖಲೆಗಳೂಂದಿಗೆ 20 ಸೆಪ್ಟೆಂಬರ್ 2025 ರ ಒಳಗಾಗಿ ತಾಲೂಕು ಕಛೇರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಥವಾ ತಾಲೂಕು ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ: 8722581982, 9739717994 ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರು (ಜಿ.ಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button